ಮುಂಬೈ: ಇಲ್ಲಿನ ಪೊವಾಯಿ ಹಿರಾನಂದಾನಿ ಗಾರ್ಡನ್ನಲ್ಲಿರುವ ಡೆಲ್ಫಿ ಕಟ್ಟಡದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.
ಮುಂಬೈನ ಡೆಲ್ಫಿ ಕಟ್ಟಡದಲ್ಲಿ ಅಗ್ನಿ ಅವಘಡ: ಅಪಾರ ಪ್ರಮಾಣದ ಹಾನಿ - Powai
ಪೊವಾಯಿ ಹಿರಾನಂದಾನಿ ಗಾರ್ಡನ್ನಲ್ಲಿ ಇರುವ ಡೆಲ್ಫಿ ಕಟ್ಟಡದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ.
ಡೆಲ್ಫಿ ಕಟ್ಟಡದಲ್ಲಿ ಅಗ್ನಿ ಅವಘಡ
ಹಿರಾನಂದಾನಿ ಗಾರ್ಡನ್ನಲ್ಲಿ ಇರುವ ಡೆಲ್ಫಿ ಕಟ್ಟಡದ 5 ಮತ್ತು 6 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಇನ್ನು ಶಾರ್ಕ್ ಸರ್ಕ್ಯೂಟ್ನಿಂದ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಕಟ್ಟಡದಲ್ಲಿನ ಅನೇಕ ವಿದ್ಯುತ್ ಉಪಕರಣಗಳು ಸುಟ್ಟು ಕರಕಲಾಗಿದೆ. ಬೆಂಕಿಯನ್ನು ಹತೋಟಿಗೆ ತರುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ ಎಂದು ಅಗ್ನಿಶಾಮಕ ದಳದ ಮುಖ್ಯ ಅಧಿಕಾರಿ ಪಿ.ಎಸ್.ರಾಹಂಡಲೆ ತಿಳಿಸಿದ್ದಾರೆ.