ಮುಂಬೈ:ಕೊರೊನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಹಾರಾಷ್ಟ್ರದಲ್ಲಿ ಕೋವಿಡ್ ಹಾವಳಿ ತೀವ್ರವಾಗಿದ್ದು, ಮುಂಬೈ ಮೇಯರ್ ಕಿಶೋರಿ ಪಡ್ನೇಕರ್ ಅವರಲ್ಲಿ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಕಿಶೋರಿ ಪಡ್ನೇಕರ್ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಬಹಿರಂಗಪಡಿಸಿದ್ದು ''ನನಗೆ ಲಕ್ಷಣರಹಿತ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆಯಂತೆ ಮನೆಯಲ್ಲಿಯೇ ಐಸೋಲೇಷನಲ್ಲಿದ್ದೇನೆ ಎಂದು ಸ್ಪಷ್ಟ ಪಡಿಸಿದ್ದಾರೆ. ಇದರ ಜೊತೆಗೆ ತಮ್ಮ ಸಂಪರ್ಕಕ್ಕೆ ಬಂದವರಿಗೆ ಸೋಂಕು ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.