ಮುಂಬೈ: 2018 ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಐಡಿ, ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರನ್ನು ಬಂಧಿಸಿದೆ
ಅರ್ನಾಬ್ ಅವರನ್ನು ಅಲಿಬಾಗ್‌ಗೆ ಕರೆದೊಯ್ಯಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ಮುಂಬೈನಲ್ಲಿ ಅರ್ನಾಬ್ ಗೋಸ್ವಾಮಿ ವಿರುದ್ಧ ಟಿಆರ್ಪಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಕೂಡ ನಡೆಯುತ್ತಿದೆ.
ಈ ಪ್ರಕರಣವು 2018 ರದ್ದು, 53 ವರ್ಷದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯ್ಕ್ ಮತ್ತು ಅವರ ತಾಯಿ ಕುಮುದಾ ನಾಯ್ಕ್ ಅವರು 2018ರ ಮೇ ತಿಂಗಳಲ್ಲಿ ಅಲಿಬಾಗ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ನಲ್ಲಿ ಅನ್ವಯ್, ಅರ್ನಾಬ್ ಗೋಸ್ವಾಮಿ ಮತ್ತು ಇತರ ಇಬ್ಬರು ವ್ಯಕ್ತಿಗಳು ನನಗೆ ನೀಡಬೇಕಿದ್ದ 5.40 ಕೋಟಿ ರೂಪಾಯಿ ಪಾವತಿಸಲಿಲ್ಲ, ಇದು ಹಣಕಾಸಿನ ತೊಂದರೆಗಳಿಗೆ ಕಾರಣವಾಯಿತು ಎಂದು ಬರೆದಿದ್ದರು.
ಸಿಐಡಿ ತನಿಖೆಗೆ ಆದೇಶಿಸಿದ್ದ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್
ಅನ್ವಯ್ ನಾಯ್ಕ್ ಅವರ ಪುತ್ರಿ ಅದ್ನ್ಯಾ ನಾಯಕ್ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ಭೇಟಿ ಮಾಡಿ ಅರ್ನಾಬ್ ಗೋಸ್ವಾಮಿ ಅವರು ಬಾಕಿ ಪಾವತಿಸದಿರುವ ಬಗ್ಗೆ ಅಲಿಬಾಗ್ ಪೊಲೀಸರು ಸರಿಯಾಗಿ ತನಿಖೆ ನಡೆಸುತ್ತಿಲ್ಲ ಎಂದು ಮನವಿ ಸಲ್ಲಿಸಿದ್ದರು. 2020ರ ಮೇ ತಿಂಗಳಿನಲ್ಲಿ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಮಹಾರಾಷ್ಟ್ರ ಗೃಹ ಸಚಿವರು ಆದೇಶಿಸಿದ್ದರು.