ಕರ್ನಾಟಕ

karnataka

ETV Bharat / bharat

ಬಾಂದ್ರಾ ರೈಲ್ವೆ ನಿಲ್ದಾಣದಲ್ಲಿ ಭಾರೀ ಜನ... ಕಾರ್ಮಿಕರ ಮೇಲೆ ಲಾಠಿ ಬೀಸಿದ ಪೊಲೀಸರು​ - ಶ್ರಮಿಕ್ ವಿಶೇಷ ರೈಲು ಲೇಟೆಸ್ಟ್ ನ್ಯೂಸ್

ಹೆಸರು ನೋಂದಾಯಿಸಿಕೊಳ್ಳದೇ ಶ್ರಮಿಕ್ ರೈಲಿನಲ್ಲಿ ಪ್ರಯಾಣಿಸಲು ಆಗಮಿಸಿದ್ದ ಸಾವಿರಾರು ವಲಸೆ ಕಾರ್ಮಿಕರನ್ನು ಪೊಲೀಸರು ಲಾಠಿ ಚಾರ್ಜ್​ ನಡೆಸಿ ವಾಪಸ್ ಕಳುಹಿಸಿದ್ದಾರೆ.

huge mob assembled at Bandra railway station
ಬಾಂದ್ರ ರೈಲ್ವೆ ನಿಲ್ದಾಣದಲ್ಲಿ ಭಾರೀ ಜನ

By

Published : May 19, 2020, 3:50 PM IST

ಮುಂಬೈ(ಮಹಾರಾಷ್ಟ್ರ): ಮಹಾರಾಷ್ಟ್ರದಿಂದ ಬಿಹಾರಕ್ಕೆ ವಿಶೇಷ ಶ್ರಮಿಕ್ ರೈಲು ಹೊರಡುವುದು ಎಂದು ತಿಳಿದು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ವಲಸೇ ಕಾರ್ಮಿಕರನ್ನು ಪೊಲೀಸರು ಲಾಠಿ ಚಾರ್ಜ್ ನಡೆಸಿ ವಾಪಸ್ ಕಳುಹಿಸಿದ್ದಾರೆ.

ಬಾಂದ್ರಾ ರೈಲ್ವೆ ನಿಲ್ದಾಣದಲ್ಲಿ ಭಾರೀ ಜನ

ವಲಸೆ ಕಾರ್ಮಿಕರನ್ನು ತಮ್ಮ ತಮ್ಮ ರಾಜ್ಯಗಳಿಗೆ ಕಳುಹಿಸಲು ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ. ಅದರಂತೆ ಇಂದು ಮುಂಬೈನಿಂದ ಬಿಹಾರಕ್ಕೆ ಶ್ರಮಿಕ್ ರೈಲಿನ ವ್ಯವಸ್ಥೆ ಮಾಡಲಾಗಿತ್ತು. ಈ ಬಗ್ಗೆ ವಿಷಯ ತಿಳಿದ ಸಾವಿರಾರು ಕಾರ್ಮಿಕರು ಮುಂಬೈನ ಬಾಂದ್ರಾ ರೈಲ್ವೆ ನಿಲ್ದಾಣದ ಮುಂದೆ ಜಮಾಯಿಸಿದ್ದರು.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಾಠಿ ಚಾರ್ಜ್ ನಡೆಸಿ ಅನರನ್ನು ವಾಪಸ್ ಕಳುಹಿಸಿದ್ದಾರೆ. ನಿಯಮದ ಪ್ರಕಾರ ಹೆಸರು ನೋಂದಾಯಿಸಿಕೊಂಡಿದ್ಧ ಒಂದು ಸಾವಿರ ಜನರಿಗೆ ಮಾತ್ರ ರೈಲು ಹತ್ತಲು ಅವಕಾಶ ನೀಡಲಾಗಿದೆ.

ABOUT THE AUTHOR

...view details