ಮುಂಬೈ: ಮುಂಬೈನಲ್ಲಿ ಭಾರೀ ಮಳೆ ಸುರಿಯುತ್ತಿರುವ ಕಾರಣ ವಿಮಾನ ಹಾರಾಟ ಸ್ಥಗಿತಗೊಂಡಿದ್ದು, ನಗರದಾದ್ಯಂತ ಟ್ರಾಫಿಕ್ ಜಾಮ್ ಉಂಟಾಗಿದೆ.
ಬೆಳಗ್ಗೆ 9 ಗಂಟೆಯಿಂದ ಕ್ಷಣ ಕ್ಷಣಕ್ಕೂ ವಾತಾವರಣ ಬದಲಾಗುತ್ತಿದೆ. ಹೀಗಾಗಿ ಕೆಲಕಾಲ ವಿಮಾನ ಹಾರಟ ಸ್ಥಗಿತಗೊಳಿಸಲಾಗಿದೆ. ಆದರೆ, ಇಲ್ಲಿಯವರೆಗೆ ಯಾವುದೇ ವಿಮಾನ ಹಾರಾಟ ರದ್ದಾಗಿಲ್ಲ. ಕೆಲವು ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.