ಕರ್ನಾಟಕ

karnataka

ETV Bharat / bharat

ಬಿಜೆಪಿ ಸೇರಿದ್ದಕ್ಕೆ ಬಾಡಿಗೆ ಮನೆ ಮಾಲೀಕನಿಂದ ಮಹಿಳೆಗೆ ಇಂಥಹ ಶಿಕ್ಷೆನಾ...! - kannada news

ಬಿಜೆಪಿ ಸೇರಿದ್ದಕ್ಕೆ ಮುಸ್ಲಿಂ ಮಹಿಳೆಯನ್ನು ಮನೆ ಮಾಲೀಕ ಮನೆಯಿಂದ ಹೊರಹೋಗುವಂತೆ ಒತ್ತಾಯಿಸಿದ್ದಾನೆ. ಅಲ್ಲದೆ, ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಪ್ರಕರಣ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮುಸ್ಲಿಂ ಮಹಿಳೆ ಗುಲಿಸ್ತಾನ

By

Published : Jul 8, 2019, 8:46 AM IST

ಅಲೀಘಡ್(ಉತ್ತರ ಪ್ರದೇಶ): ಸಿಎಂ ಯೋಗಿ ಆದಿತ್ಯಾನಾಥ್​ ರಾಜ್ಯದಲ್ಲಿ ಮತ್ತೊಂದು ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಬಿಜೆಪಿ ಸೇರಿದ್ದ ಮುಸ್ಲಿಂ ಮಹಿಳೆಯನ್ನು ಮಾಲೀಕ ಮನೆಯಿಂದ ಹೊರಹೋಗುವಂತೆ ಆದೇಶಿಸಿರುವ ಆರೋಪ ಪ್ರಕರಣ ಘಟನೆ ಅಲೀಘಡ್​ ಜಿಲ್ಲೆಯಲ್ಲಿ ನಡೆದಿದೆ.

ಮಹಿಳೆ ಗುಲಿಸ್ತಾನ್​ ಭಾನುವಾರ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಆಕೆ ವಾಸವಾಗಿದ್ದ ಮನೆ ಮಾಲೀಕ ಮನೆ ಬಿಟ್ಟು ತೆರಳುವಂತೆ ಸೂಚಿಸಿದ್ದಾನೆ ಎನ್ನಲಾಗ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಗುಲಿಸ್ತಾನ್​ "ನಾನು ನಿನ್ನೆ ಬಿಜೆಪಿ ಸದಸ್ಯತ್ವ ಸ್ವೀಕರಿಸಿದ್ದೇನೆ. ಈ ವಿಷಯ ತಿಳಿಯುತ್ತಿದ್ದಂತೆ ನಾನು ವಾಸವಾಗಿದ್ದ ಮನೆ ಮಾಲೀಕ ನನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ತಕ್ಷಣ ಮನೆ ಖಾಲಿ ಮಾಡುವಂತೆ ತಿಳಿಸಿದ್ದಾನೆ'' ಎಂದು ಆರೋಪಿಸಿದ್ದಾರೆ.

ಘಟನೆಗೆ ಸಂಬಂಧಪಟ್ಟಂತೆ ಮನೆ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಲೀಘಡ್​ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಆಕಾಶ್ ಕುಲ್ಹಾರಿ ತಿಳಿಸಿದ್ದಾರೆ.

ABOUT THE AUTHOR

...view details