ಲಕ್ನೋ: ಲವ್ ಜಿಹಾದ್ ವಿರುದ್ಧ ಕಾನೂನು ಸಮರ ಸಾರಿದ್ದ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರ ಜಾರಿಗೆ ತಂದ ಸುಗ್ರೀವಾಜ್ಞೆಗೆ ಮುಸ್ಲಿಂ ಮುಖಂಡರು ಸ್ವಾಗತ ಮಾಡಿದ್ದಾರೆ. ಜಾರಿಯಾದ ಸುಗ್ರೀವಾಜ್ಞೆಯಿಂದ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸದಂತೆ ನೋಡಿಕೊಳ್ಳಬೇಕು ಎಂದು ಹಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟವು ಮಂಗಳವಾರ ಈ ಬಗ್ಗೆ ಸುಗ್ರೀವಾಜ್ಞೆಗೆ ಹೊರಡಿಸಿದೆ. ಕಾನೂನೂ ಮೀರಿದವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಅದರ ಷರತ್ತುಗಳನ್ನು ಉಲ್ಲಂಘಿಸಿದವರಿಗೆ 50,000 ರೂ. ದಂಡ ವಿಧಿಸುವುದಾಗಿ ತಿಳಿಸಿದ್ದಾರೆ. ಈ ಕಾನೂನನ್ನು ಜಾರಿಗೆ ತಂದಿದ್ದು ಒಳ್ಳೆಯದು. ಆದರೆ, ನಮ್ಮ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.
ಕೇವಲ ಮದುವೆಗಾಗಿ ಮಾತ್ರ ಧಾರ್ಮಿಕ ಮತಾಂತರ ಬಗ್ಗೆ ನಮ್ಮ ಆಕ್ಷೇಪವಿಲ್ಲ. ಬಲವಂತದ ಮತಾಂತರ ಮಾಡುವುದರ ಬಗ್ಗೆ ಈಗಾಗಲೇ ಮುಸ್ಲಿಂ ಕಾನೂನಿನಲ್ಲಿ ಅಪರಾಧವೆಂದು ಪರಿಗಣಿಸಲ್ಪಟ್ಟಿದೆ. ಕುರಾನಿನಲ್ಲೂ ಉಲ್ಲೇಖವಿದೆ. ಧರ್ಮದ ಹೆಸರಿನಲ್ಲಿ ನಡೆಯುವ ಬಲವಂತದ ಮತಂತಾರವನ್ನು ನಮ್ಮ ದೇವರು(ಅಲ್ಲಾಹು) ಸಮರ್ಥಿಸುವುದಿಲ್ಲ. ಆದ್ದರಿಂದ ಕಾನೂನು ಮೀರಿದವರಿಗೆ ಶಿಕ್ಷೆ ವಿಧಿಸಲು ನಮಗೆ ಯಾವುದೇ ಆಕ್ಷೇಪವಿಲ್ಲ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ (ಎಐಎಂಪಿಎಲ್‌ಬಿ) ಹಿರಿಯ ಸದಸ್ಯ ಖಾಲಿದ್ ರಶೀದ್ ಫರಂಗಿಮಹ್ಲಿ ಮಾಧ್ಯಮಗಳಿಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.