ವಿಜಯವಾಡ/ಮುಂಬೈ:ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್‌ಸಿ) ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಇದೀಗ ಇದಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ಮೋಹನ್ ರೆಡ್ಡಿ ಹಾಗೂ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಕೂಡ ಧ್ವನಿ ಗೂಡಿಸಿದ್ದಾರೆ.
ಕಡಪಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿ ಮಾತನಾಡಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ, ನನ್ನ ಸರ್ಕಾರ ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಯಾಗಿದ್ದು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಅದನ್ನ ಜಾರಿಗೊಳ್ಳಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಎನ್ಆರ್‌ಸಿ ಜಾರಿ ಮಾಡುವ ಕುರಿತು ನನ್ನ ಸಹೋದದರಿಗೆ ಅಭಿಪ್ರಾಯ ತಿಳಿಸುವಂತೆ ಹೇಳಿದ್ದೆ. ಸದ್ಯ ಈ ಕುರಿತು ಸ್ಪಷ್ಟ ನಿರ್ಧಾರವನ್ನು ಮಾಡಿದ್ದು, ಆಂಧ್ರಪ್ರದೇಶದಲ್ಲಿ ಯಾವುದೇ ಕಾರಣಕ್ಕೂ ಎನ್ಆರ್‌ಸಿ ಕಾಯ್ದೆಯನ್ನು ಜಾರಿ ಮಾಡುವುದಿಲ್ಲ ಎಂದಿದ್ದಾರೆ. ಆದರೆ, ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮಸೂದೆ ಪಾಸ್ ಆಗಲು ಕೇಂದ್ರದ ಜತೆ ವೈಎಸ್ಆರ್ ಕಾಂಗ್ರೆಸ್ ಸಂಸದರು ಕೈಜೋಡಿಸಿದ್ದರು.