ನವದೆಹಲಿ :ಪ್ರಧಾನಿ ನರೇಂದ್ರ ಮೋದಿಯವರು ಲಾಕ್‌ಡೌನ್ ಕುರಿತು ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡುವ ಕೆಲವೇ ಗಂಟೆಗಳ ಮೊದಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ವಿಡಿಯೋ ಸಂದೇಶವೊಂದನ್ನು ಹರಿಬಿಟ್ಟಿದ್ದು ಈ ಕುರಿತು ಪ್ರತಿಕ್ರಿಯಿಸಿ ಟ್ಟೀಟ್ ಮಾಡಿರುವ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ, ಸೋನಿಯಾ ಗಾಂಧಿ ಅವರಿಗೆ ಅರೋಗ್ಯ ಕಾಳಜಿ ವಹಿಸುವಂತೆ ಕೇಳಿಕೊಂಡಿದ್ದಾರೆ.
ಸೋನಿಯಾ ಗಾಂಧಿ ಅವರು ವಿಡಿಯೋ ಸಂದೇಶದಲ್ಲಿ, ''ದೇಶದಲ್ಲಿ ಕೊಲಾಹಲ ಹುಟ್ಟಿಸಿರುವ ಕೋವಿಡ್-19 ನಾಶಕ್ಕೆ ಅಧಿಕಾರ ಇದ್ದರೂ, ಇಲ್ಲದಿದ್ದರೂ ಜನರೊಂದಿಗೆ ಸದಾ ಇರುವುದಾಗಿ ಮತ್ತು ಪಕ್ಷವು ಜನರಿಗೆ ಸಹಾಯಕವಾಗಿರುತ್ತದೆ'' ಎಂದು ಹೇಳಿದ್ದಾರೆ.