ಶ್ರೀನಗರ: ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಚಾದೂರಾ ಪ್ರದೇಶದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯೊಂದಿಗೆ ಸಂಬಂಧ ಹೊಂದಿರುವ ಆರು ಉಗ್ರ ಸಹಚರರನ್ನು ಬಂಧಿಸಿದ್ದಾರೆ.
ಈ ಘಟಕವು ಮಾದಕ ವಸ್ತುಗಳ ವ್ಯಾಪಾರ, ಶಸ್ತ್ರಾಸ್ತ್ರಗಳ ಸರಬರಾಜು ಮತ್ತು ಹಣದ ವ್ಯವಸ್ಥೆ ಮಾಡುವಲ್ಲಿ ತೊಡಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.