ನವದೆಹಲಿ: ಇಂದು ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಎಲ್ಲಾ ಮತದಾರರು ತಪ್ಪದೇ ಮತ ಚಲಾಯಿಸುವ ಮುಖೇನ ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡಬೇಕು ಎಂದು ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ.
ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆಗಳಿಗೆ ಚುನಾವಣೆ ನಡೆಯುತ್ತಿದೆ. ಅಲ್ಲದೇ ಭಾರತದ ವಿವಿಧ ಭಾಗಗಳಲ್ಲಿ ಉಪ ಚುನಾವಣೆಗಳು ನಡೆಯುತ್ತಿವೆ. ಈ ರಾಜ್ಯಗಳಲ್ಲಿನ ಮತದಾರರು ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಬೇಕು. ಈ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮದಿಂದ ಆಚರಿಸಬೇಕು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುತ್ತಾರೆ ಅಂತ ನಾನು ಭಾವಿಸುತ್ತೇನೆ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.