ಅನಂತನಾಗ್ (ಶ್ರೀನಗರ): ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಆರ್ಟಿಕಲ್ 370 ರದ್ದುಗೊಂಡ ಬಳಿಕ ಕಣಿವೆ ನಾಡಿನಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಕೇಂದ್ರ ಸರ್ಕಾರ ಎಲ್ಲ ರೀತಿಯ ಕ್ರಮ ಕೈಗೊಂಡಿದೆ.
ಕಣಿವೆ ನಾಡಿನಲ್ಲೇ ಬೀಡು ಬಿಟ್ಟಿರುವ ಮೋದಿ ಬಲಗೈ ಬಂಟ ದೋವಲ್... ಅನಂತನಾಗ್ನಲ್ಲಿ ಓಡಾಟ! - ಅಜಿತ್ ದೋವಲ್
ಆರ್ಟಿಕಲ್ 370 ರದ್ದುಗೊಂಡಿದ್ದು, ಕಣಿವೆ ನಾಡಿನಲ್ಲೇ ಮೋದಿ ಬಲಗೈ ಬಂಟ ಅಜಿತ್ ದೋವಲ್ ಬೀಡುಬಿಟ್ಟಿದ್ದಾರೆ.
ಈ ಮಧ್ಯೆ ಕೇಂದ್ರ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕಳೆದ ಕೆಲ ದಿನಗಳಿಂದ ಜಮ್ಮು-ಕಾಶ್ಮೀರದಲ್ಲೇ ಬೀಡು ಬಿಟ್ಟಿದ್ದು, ಅಲ್ಲಿನ ಸ್ಥಳೀಯರೊಂದಿಗೆ ಖುದ್ದಾಗಿ ಮಾತುಕತೆ ನಡೆಸುತ್ತಿದ್ದಾರೆ. ಮೊನ್ನೆ ಶೋಪಿಯಾನ್ ಪ್ರದೇಶದಲ್ಲಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿ, ಅವರೊಂದಿಗೆ ಊಟ ಮಾಡಿದ್ದ ರಾಷ್ಟ್ರೀಯ ಭದ್ರತಾ ಸಲಹೆಗಾರ ಇದೀಗ ಹೆಚ್ಚು ಉಗ್ರ ಚಟುವಟಿಕೆ ನಡೆಯುವ ಅನಂತನಾಗ್ ಪ್ರದೇಶಕ್ಕೆ ತೆರಳಿ ಅಲ್ಲಿನ ಜನರೊಂದಿಗೆ ಮಾತುಕತೆ ನಡೆಸಿದರು.
ಆರ್ಟಿಕಲ್ 370 ರದ್ದು ಮಾಡಿ ಕಳೆದ ನಾಲ್ಕು ದಿನಗಳಿಂದ ಕಣಿವೆ ನಾಡಿನಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿತ್ತು. ಆದರೆ, ಈದ್ ಹಬ್ಬ ಆಚರಣೆ ಇರುವ ಕಾರಣ, ನಿನ್ನೆ ಅದನ್ನ ಕೇಂದ್ರ ಸರ್ಕಾರ ವಾಪಸ್ ಪಡೆದುಕೊಂಡಿತು. ಇನ್ನು ಜಮ್ಮು-ಕಾಶ್ಮೀರ ಹಾಗೂ ಲಡಾಖ್ ಇನ್ಮುಂದೆ ಕೇಂದ್ರಾಡಳಿತ ಪ್ರದೇಶಗಳಾಗಲಿದ್ದು, ಎಲ್ಲ ರೀತಿಯ ಸೌಲಭ್ಯ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದರು.