ಚಂಡೀಗಢ:ಈ ಹಿಂದೆ ಭಾರತೀಯ ಜತನಾ ಪಾರ್ಟಿ ಬಿಟ್ಟು ಕಾಂಗ್ರೆಸ್ ಸೇರಿದ್ದ ಮಾಜಿ ಕ್ರಿಕೆಟರ್ ನವಜೋತ್ ಸಿಂಗ್ ಸಿದ್ದು ಪತ್ನಿ ಇದೀಗ ಕಾಂಗ್ರೆಸ್ ಪಕ್ಷಕ್ಕೂ ರಾಜೀನಾಮೆ ನೀಡಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಚಂಡೀಗಢ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿದ್ದ ನವಜೋತ್ ಸಿಂಗ್ ಸಿದ್ದು ಪತ್ನಿ ನವಜೋತ್ ಕೌರ್ ಸಿದ್ದುಗೆ ಪಕ್ಷ ಟಿಕೆಟ್ ನೀಡಿರಲಿಲ್ಲ. ಇದರಿಂದ ಅಸಮಾಧಾನಗೊಂಡಿದ್ದ ಅವರು ಇದೀಗ ಕಾಂಗ್ರೆಸ್ ಪಕ್ಷಕ್ಕೆ ವಿದಾಯ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಶಾಸಕ ನವಜೋತ್ ಸಿಂಗ್ ಸಿದ್ದು ಪತ್ನಿ ಇದೇ ವೇಳೆ ಮಾತನಾಡಿರುವ ಅವರು ಮುಂದಿನ ದಿನಗಳಲ್ಲಿ ತಾವು ಯಾವುದೇ ಪಕ್ಷಕ್ಕೂ ಸೇರಿಕೊಳ್ಳುವುದಿಲ್ಲ ಎಂದು ಹೇಳಿರುವ ನವಜೋತ್ ಕೌರ್, ಓರ್ವ ಸಾಮಾಜಿಕ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಇನ್ನು ಪಂಜಾಬ್ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದ ಗಂಡ ನವಜೋತ್ ಸಿಂಗ್ ಸಿದ್ದುಗೂ ಸಹ ಸಚಿವ ಸಂಪುಟ ಪುನರ್ವಿಂಗಡನೆ ವೇಳೆ ಮಂತ್ರಿ ಸ್ಥಾನದಿಂದ ಕೆಳಗಿಳಿಸಲಾಗಿದೆ. ಈ ಹಿಂದೆ ಬಿಜೆಪಿಯಲ್ಲಿದ್ದಾಗ ಮೊದಲು ಪತ್ನಿ ಪಕ್ಷ ತೊರೆದು, ತದನಂತರ ನವಜೋತ್ ಬಿಜೆಪಿಗೆ ವಿದಾಯ ಹೇಳಿದ್ದರು. ಈಗಲೂ ಇಂತಹ ಘಟನೆ ನಡೆದರೂ ಅಚ್ಚರಿ ಪಡಬೇಕಾಗಿಲ್ಲ.