ಬಿಜಾಪುರ (ಛತ್ತಿಸ್ಗಢ):ಜಿಲ್ಲೆಯಲ್ಲಿ ಮಾವೋವಾದಿಗಳ ಅಟ್ಟಹಾಸ ಹೆಚ್ಚಾಗಿದೆ. ಬಸಗುಡ ಪೊಲೀಸ್ ಠಾಣೆಯಿಂದ 2 ಕಿಲೋ ಮೀಟರ್ ದೂರದಲ್ಲಿರುವ ರಾಜ್ಪೇಟಾ ಪ್ರದೇಶದಲ್ಲಿ ನಕ್ಸಲರು ಐಇಡಿ ಸ್ಫೋಟಗೊಳಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ನಡುರಸ್ತೆಯಲ್ಲಿ ಹುದುಸಿಟ್ಟಿದ್ದ ಸುಧಾರಿತ ಸ್ಫೋಟಕದ ಮೇಲೆ ವಾಹನವೊಂದು ಹರಿದುಹೋದ ಸ್ಫೋಟಗೊಂಡಿದೆ. ಇಬ್ಬರು ಗಾಯಗೊಂಡಿದ್ದು, ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸರನ್ನು ಗುರಿಯಾಗಿಸಿಕೊಂಡು ಐಇಡಿ ಇಟ್ಟಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಕಮಲಾಲೋಚನ್ ಕಶ್ಯಪ್ ತಿಳಿಸಿದ್ದಾರೆ.
ಅಲ್ಲದೆ ಗಂಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಕ್ಸಲರು ಇಬ್ಬರನ್ನು ಹತ್ಯೆಗೈದಿದ್ದಾರೆ ಎಂಬ ಮಾಹಿತಿ ಇದೆ. ಆದರೆ, ಈವರೆಗೆ ಯಾವುದೇ ರೀತಿಯ ಪ್ರಕರಣ ದಾಖಲಾಗಿಲ್ಲ.
ದಂತೇವಾಡದಲ್ಲಿ ಸರ್ಪಂಚ್ ಪತಿ ಸಂತೋಷ್ ಕಶ್ಯಪ್ ಎಂಬಾತನನ್ನು ನಕ್ಸಲರು ಕೊಲೆ ಮಾಡಿದ್ದಾರೆ ಎಂದು ಎಸ್ಪಿ ಅಭಿಷೇಕ್ ಪಲ್ಲವ ಮಾಹಿತಿ ನೀಡಿದ್ದಾರೆ.
ಕಳೆದ ಶನಿವಾರ ಸುಕ್ಮಾದಲ್ಲಿ ನಕ್ಸಲರು ಸಿಆರ್ಪಿಎಫ್ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಐಇಡಿ ಸ್ಫೋಟಗೊಳಿಸಿದ್ದರು. ಘಟನೆಯಲ್ಲಿ ಸಿಆರ್ಪಿಎಫ್ನ ಸಹಾಯಕ ಕಮಾಂಡೆಂಟ್ ನಿತಿನ್ ಭಲೇರಾವ್ ಹುತಾತ್ಮರಾಗಿದ್ದು, 9 ಜನರು ಗಂಭೀರವಾಗಿ ಗಾಯಗೊಂಡಿದ್ದರು.