ನವದೆಹಲಿ: ಜಮ್ಮು, ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370 ನೇ ವಿಧಿ ಮತ್ತು 35-ಎ ಕಲಂ ರದ್ದುಪಡಿಸಿದ ಕೇಂದ್ರ ಸರ್ಕಾರದ ನಿಲುವನ್ನು ಪ್ರಶ್ನಿಸಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಸುಪ್ರಿಂಕೋರ್ಟ್ ಮೆಟ್ಟಿಲೇರಿದ್ದು, ಇದು ಅಸಾಂವಿಧಾನಿಕ ನಡೆ ಎಂದು ಪಕ್ಷ ಆರೋಪಿಸಿದೆ.
ನ್ಯಾಷನಲ್ ಕಾನ್ಫರೆನ್ಸ್ ಸಂಸದ ಮೊಹಮ್ಮದ್ ಅಕ್ಬರ್ ಲೋನ್ ಹಾಗೂ ಹುಸೇನ್ ಮಸೂದಿ ಅವರು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಿದ ಜಮ್ಮು-ಕಾಶ್ಮೀರ ಪುನರ್ವಿಂಗಡಣೆ ಕಾಯ್ದೆ-2019 ಹಾಗೂ ರಾಷ್ಟ್ರಪತಿ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದಾರೆ.
370ನೇ ವಿಧಿ ರದ್ದು; ಸುಪ್ರೀಂ ಮೆಟ್ಟಿಲೇರಿದ ಎನ್ಸಿಪಿ
ಜಮ್ಮು, ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370 ನೇ ವಿಧಿ ಮತ್ತು 35-ಎ ಕಲಂ ರದ್ದುಪಡಿಸಿದ ಕೇಂದ್ರ ಸರ್ಕಾರದ ನಿಲುವನ್ನು ಪ್ರಶ್ನಿಸಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಸುಪ್ರಿಂಕೋರ್ಟ್ ಮೆಟ್ಟಿಲೇರಿದೆ.
NC moves SC against Centre’s 370 move
370ನೇ ವಿಧಿ ಬದಲಿಸಲು ಅಥವಾ ರದ್ದುಮಾಡಲು ಇರುವ ಸಂವಿಧಾನಬದ್ಧ ಕಾನೂನುಗಳನ್ನು ಅನುಸರಿಸಿಲ್ಲ. ಕೇಂದ್ರ ಸರ್ಕಾರವು ಸಾಂವಿಧಾನಿಕ ಸಮಿತಿಯ ಶಿಫಾರಸಿನ ಮೇಲೆ ಮಾತ್ರ ಜಮ್ಮು & ಕಾಶ್ಮೀರಕ್ಕೆ ಸಂಬಂಧಿಸಿದ ನಿರ್ಧಾರ ಕೈಗೊಳ್ಳಬಹುದು ಎಂದು ವಾದಿಸಿದ್ದಾರೆ. ಈ ಕೂಡಲೇ ರಾಷ್ಟ್ರಪತಿ ಅವರ ಆದೇಶವನ್ನು ಅನೂರ್ಜಿತಗೊಳಿಸಿ ಎಂದು ಅವರು ಆಗ್ರಹಿಸಿದ್ದಾರೆ.