ಮಹಾರಾಷ್ಟ್ರ:ಅಚ್ಚರಿಯ ರಾಜಕೀಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರದಲ್ಲಿ ಎನ್ಸಿಪಿ, ಬಿಜೆಪಿ ಜೊತೆ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಹಾಗು ಶಿವಸೇನೆ ಮುಖಂಡ ಸಂಜಯ್ ರಾವತ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಬಿಜೆಪಿಯನ್ನು ಬೆಂಬಲಿಸುವ ನಿರ್ಧಾರ ಎನ್ಸಿಪಿಯದ್ದಲ್ಲ. ಇದು ಅಜಿತ್ ಪವಾರ್ ವೈಯುಕ್ತಿಕ ನಿರ್ಧಾರ ಎಂದಿದ್ದಾರೆ. ಹಾಗೆಯೇ ಅಜಿತ್ ಪವಾರ್ ನಿರ್ಧಾರಕ್ಕೆ ನಮ್ಮ ಸಮ್ಮತಿ ಇಲ್ಲ. ಇದನ್ನು ನಾವು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.