ನವದೆಹಲಿ:ಹಥ್ರಾಸ್ ಸಂತ್ರಸ್ತೆಯ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಪ್ರಸಿದ್ಧ ವ್ಯಕ್ತಿಗಳಿಗೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ನೀಡಿದೆ.
ಹಥ್ರಾಸ್ ಘಟನೆ: ಬಾಲಿವುಡ್ ನಟಿ ಸೇರಿದಂತೆ ಪ್ರಸಿದ್ಧ ವ್ಯಕ್ತಿಗಳಿಗೆ ನೋಟಿಸ್
ಹಥ್ರಾಸ್ ಘಟನೆಗೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಸೇರಿದಂತೆ ಕೆಲ ಪ್ರಸಿದ್ಧ ವ್ಯಕ್ತಿಗಳಿಗೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ನೀಡಿದೆ.
ಬಿಜೆಪಿ ಐಟಿ ಸೆಲ್ ಅಧ್ಯಕ್ಷ ಅಮಿತ್ ಮಾಲ್ವಿಯಾ, ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಮತ್ತು ಬಾಲಿವುಡ್ ನಟಿ ಸ್ವರ ಭಾಸ್ಕರ್ ಅವರಿಗೆ ಕಳುಹಿಸಿರುವ ನೋಟಿಸ್‌ನಲ್ಲಿ, ಆಕ್ಷೇಪಾರ್ಹ ಪೋಸ್ಟ್ಗಳನ್ನು ಕೂಡಲೇ ತೆಗೆದುಹಾಕಬೇಕು ಎಂದು ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಸೂಚಿಸಿದೆ.
ಹಥ್ರಾಸ್‌ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ದಲಿತ ಯುವತಿಯ ವೈಯಕ್ತಿಕ ವಿವರಗಳನ್ನು ಬಹಿರಂಗಪಡಿಸಿದ ಕುರಿತು ಈ ವ್ಯಕ್ತಿಗಳಿಂದ ಆಯೋಗ ವಿವರಣೆ ಕೋರಿದೆ. ಮಹಿಳಾ ಆಯೋಗವು ಈ ಮೂವರಿಗೆ ತಮ್ಮ ಟ್ವಿಟರ್ ಖಾತೆಗಳಲ್ಲಿ ಹಂಚಿಕೊಂಡಿರುವ ಚಿತ್ರಗಳನ್ನು ತಕ್ಷಣ ತೆಗೆದುಹಾಕುವಂತೆ ಸೂಚಿಸಿದೆ. ದಯವಿಟ್ಟು ಇಂತಹ ಪೋಸ್ಟ್ಗಳನ್ನು ಹಾಕಬೇಡಿ ಎಂದು ಮನವಿಯನ್ನೂ ಮಾಡಿದೆ.