ನವದೆಹಲಿ: ಕಳೆದ ಸೆಪ್ಟೆಂಬರ್ 13ರಂದು ದೇಶಾದ್ಯಂತ 2020ನೇ ಸಾಲಿನ ನೀಟ್ ಪರೀಕ್ಷೆ ನಡೆದಿದ್ದು, ಅದರ ಫಲಿತಾಂಶ ಅಕ್ಟೋಬರ್ 16ರಂದು ಪ್ರಕಟಗೊಳ್ಳಲಿದೆ. ಇದರ ಮಧ್ಯೆ ಸುಪ್ರೀಂಕೋರ್ಟ್ ಮತ್ತೊಂದು ಮಹತ್ವದ ನಿರ್ಧಾರ ಹೊರಹಾಕಿದೆ.
NEET ಮಿಸ್ ಮಾಡಿಕೊಂಡವರಿಗೆ ಇನ್ನೊಂದು ಚಾನ್ಸ್: ಅ.14ರಂದು ಪರೀಕ್ಷೆ: ಸುಪ್ರೀಂ - ಸುಪ್ರೀಂಕೋರ್ಟ್ ನೀಟ್ ಪರೀಕ್ಷೆ
ರಾಷ್ಟ್ರೀಯ ಅರ್ಹತೆ ಪ್ರವೇಶ ಪರೀಕ್ಷೆ (ನೀಟ್) ಮಿಸ್ ಮಾಡಿಕೊಂಡವರಿಗೆ ಮತ್ತೊಮ್ಮೆ ಬರೆಯಲು ಸುಪ್ರೀಂಕೋರ್ಟ್ ಅವಕಾಶ ನೀಡಿದೆ.
ಮಹಾಮಾರಿ ಕೊರೊನಾದಿಂದಾಗಿ ಈ ಪರೀಕ್ಷೆ ಮಿಸ್ ಮಾಡಿಕೊಂಡವರಿಗೆ ಮತ್ತೊಮ್ಮೆ ನೀಟ್ ಬರೆಯಲು ಅವಕಾಶ ನೀಡಲಾಗಿದ್ದು, ಅಕ್ಟೋಬರ್ 14ರಂದು ಪರೀಕ್ಷೆ ನಡೆಯಲಿದೆ. ಮಹಾಮಾರಿ ಕೊರೊನಾ ವೈರಸ್ ಕಾರಣ ಕಂಟೇನ್ಮೆಂಟ್ ವಲಯದಲ್ಲಿನ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಾಧ್ಯವಾಗಿರಲಿಲ್ಲ. ಆದರೆ, ಇದೀಗ ಮತ್ತೊಂದು ಅವಕಾಶ ನೀಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ನೇತೃತ್ವದ ಪೀಠ ಈ ಆದೇಶ ಹೊರಹಾಕಿದೆ. ಇದೇ ವಿಚಾರವಾಗಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಟ್ವೀಟ್ ಕೂಡ ಮಾಡಿದ್ದಾರೆ. ಸೆಪ್ಟೆಂಬರ್ 13ರಂದು ಪರೀಕ್ಷೆ ಆಯೋಜನೆ ಮಾಡಿದ್ದಕ್ಕಾಗಿ ಅನೇಕ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಜತೆಗೆ ತಾವು ಈ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಅಳಲು ತೊಡಿಕೊಂಡಿದ್ದರು. ಇದರ ಬೆನ್ನಲ್ಲೇ ಸುಪ್ರೀಂಕೋರ್ಟ್ ಈ ಮಹತ್ವದ ಆದೇಶ ಹೊರಹಾಕಿದೆ.