ನವದೆಹಲಿ: ಪಂಜಾಬ್ನಲ್ಲಿ ಪ್ರಧಾನಿ ಮೋದಿ ಪ್ರತಿಮೆ ದಹಿಸಿದ ಘಟನೆಯನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಖಂಡಿಸಿದ್ದಾರೆ. ನೆಹರೂ, ಗಾಂಧಿ ವಂಶಕ್ಕೆ ಎಂದಿಗೂ ಪ್ರಧಾನ ಮಂತ್ರಿ ಕಚೇರಿ ಮೇಲೆ ಗೌರವವಿಲ್ಲ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ದ್ವೇಷದ ರಾಜಕೀಯದಲ್ಲಿ ತೊಡಗಿದೆ. ಪಂಜಾಬ್ನಲ್ಲಿ ಪ್ರಧಾನಿ ಪ್ರತಿಕೃತಿ ದಹಿಸಿರೋದು ಅನಿರೀಕ್ಷಿತವಲ್ಲ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿರ್ದೇಶನದ ಮೇರೆಗೆ ಈ ಘಟನೆ ನಡೆದಿದೆ ಎಂದು ವಾಗ್ದಾಳಿ ನಡೆಸಿದರು.
2004 ರಿಂದ 2014 ರ ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರಧಾನಮಂತ್ರಿಯ ಅಧಿಕಾರವನ್ನು ದುರ್ಬಲಗೊಳಿಸಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಸಹ್ಯವರ್ತನೆ ತೋರುವ ಯಾವುದಾದರೊಂದು ಪಕ್ಷವಿದ್ದರೆ ಅದು ಕಾಂಗ್ರೆಸ್. ರಾಜಸ್ಥಾನದಲ್ಲಿ ಎಸ್ಸಿ, ಎಸ್ಟಿ ಸಮುದಾಯಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಪಂಜಾಬ್ನಲ್ಲಿ ಮಂತ್ರಿಗಳು ವಿದ್ಯಾರ್ಥಿ ವೇತನ ಹಗರಣಗಳಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.