ಕರ್ನಾಟಕ

karnataka

ETV Bharat / bharat

ಸುಭಾಷ್ ಚಂದ್ರಬೋಸ್ ಸೋದರಸೊಸೆ ಚಿತ್ರಾ ಘೋಷ್ ನಿಧನ - ಹೃದಯಾಘಾತದಿಂದ ಚಿತ್ರಾ ಘೋಷ್ ನಿಧನ

ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸೋದರ ಸೊಸೆ, ಪ್ರಖ್ಯಾತ ಶಿಕ್ಷಣ ತಜ್ಞೆ ಚಿತ್ರಾ ಘೋಷ್ ಹೃದಯಾಘಾತದಿಂದ ನಿಧನರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

condolence
condolence

By

Published : Jan 8, 2021, 4:28 PM IST

ಕೋಲ್ಕತ್ತಾ (ಪಶ್ಚಿಮ ಬಂಗಾಳ):ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸೋದರ ಸೊಸೆ, ಪ್ರಖ್ಯಾತ ಶಿಕ್ಷಣ ತಜ್ಞೆ ಚಿತ್ರಾ ಘೋಷ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಬಗ್ಗೆ ಅವರ ಸೋದರಳಿಯ ಮತ್ತು ಬಿಜೆಪಿ ನಾಯಕ ಚಂದ್ರಕುಮಾರ್ ಬೋಸ್ ಮಾಹಿತಿ ನೀಡಿದ್ದಾರೆ.

‘ಪ್ರಾಧ್ಯಾಪಕಿ ಚಿತ್ರಾ ಘೋಷ್ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದಾರೆ. ನೇತಾಜಿಗೆ ಸಂಬಂಧಿಸಿದ ಕೆಲ ವಿಚಾರಗಳ ಬಗ್ಗೆ ಅವರೊಂದಿಗೆ ಚರ್ಚಿಸಿದ್ದು, ಆ ಸಂವಾದವನ್ನು ನಾನು ನೆನಪಿಟ್ಟುಕೊಳ್ಳುತ್ತೇನೆ. ಅವರ ನಿಧನದ ಸುದ್ದಿ ತಿಳಿದು ಬೇಸರವಾಯಿತು. ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲಿ. ಓಂ ಶಾಂತಿ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಲೇಡಿ ಬ್ರಬೋರ್ನ್​​ ಕಾಲೇಜಿನಲ್ಲಿ ರಾಜ್ಯಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಇವರು, ಶಿಕ್ಷಣ ಕ್ಷೇತ್ರದಲ್ಲಿ ಮಹಾನ್ ಸಾಧನೆ ಮಾಡಿದ್ದಾರೆ.

ABOUT THE AUTHOR

...view details