ನವದೆಹಲಿ :ಜೈಲುಗಳಿಂದ ಕೈದಿಗಳನ್ನು ಕಡ್ಡಾಯವಾಗಿ ಬಿಡುಗಡೆ ಮಾಡುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿಲ್ಲ ಎಂದು ಸುಪ್ರೀಂಕೋರ್ಟ್ ಸೋಮವಾರ ಸ್ಪಷ್ಟಪಡಿಸಿದೆ.
ಜೈಲಿನಿಂದ ಕಡ್ಡಾಯವಾಗಿ ಕೈದಿಗಳನ್ನು ಬಿಡುಗಡೆ ಮಾಡುವಂತೆ ಹೇಳಿಲ್ಲ.. ಸುಪ್ರೀಂಕೋರ್ಟ್ ಸ್ಪಷ್ಟನೆ
ಕೊರೊನಾ ಹರಡುವ ಭೀತಿ ಹಿನ್ನೆಲೆ ಜೈಲುಗಳಲ್ಲಿ ಜನಸಂದಣಿ ಕಡಿಮೆಗೊಳಿಸಲು ಆಯಾ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮಲ್ಲಿನ ಪರಿಸ್ಥಿತಿಗೆ ಅನುಗುಣವಾಗಿ ಕೈದಿಗಳನ್ನು ಬಿಡುಗಡೆ ಮಾಡುವ ಬಗ್ಗೆ ನಿರ್ಧರಿಸುವಂತೆ ಆದೇಶಿಸಿದ್ದೆವು ಎಂದಿದೆ.
ಈ ಬಗ್ಗೆ ಸ್ಪಷ್ಟನೆ ನೀಡಿದ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್, ಎಂ ಎಂ ಶಾಂತನಗೌಡರ್ ಅವರನ್ನೊಳಗೊಂಡ ನ್ಯಾಯಪೀಠ, ಬಂಧನ ಕೇಂದ್ರಗಳಲ್ಲಿರುವ ಎಲ್ಲಾ ಕೈದಿಗಳನ್ನು ಕಡ್ಡಾಯವಾಗಿ ಬಿಡುಗಡೆ ಮಾಡಿ ಎಂದು ನಾವು ಹೇಳಿಲ್ಲ. ಕೊರೊನಾ ಹರಡುವ ಭೀತಿ ಹಿನ್ನೆಲೆ ಜೈಲುಗಳಲ್ಲಿ ಜನಸಂದಣಿ ಕಡಿಮೆಗೊಳಿಸಲು ಆಯಾ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮಲ್ಲಿನ ಪರಿಸ್ಥಿತಿಗೆ ಅನುಗುಣವಾಗಿ ಕೈದಿಗಳನ್ನು ಬಿಡುಗಡೆ ಮಾಡುವ ಬಗ್ಗೆ ನಿರ್ಧರಿಸುವಂತೆ ಆದೇಶಿಸಿದ್ದೆವು ಎಂದಿದೆ.
ಕಾರಾಗೃಹಗಳು ಮತ್ತು ಇತರ ಬಂಧನ ಕೇಂದ್ರಗಳು ಈ ಹಿಂದಿನ ಆದೇಶದವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದೆ.