ಗಾಜಿಯಾಬಾದ್ (ಉತ್ತರ ಪ್ರದೇಶ):ಭಾರತೀಯ ರೈತ ಸಂಘದ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕೈಟ್ಗೆ ಅಪರಿಚಿತ ಸಂಖ್ಯೆಯಿಂದ ಜೀವ ಬೆದರಿಕೆ ಕರೆ ಬಂದಿದೆ ಎಂದು ಕೌಶಂಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕರೆ ಮಾಡಿದ ವ್ಯಕ್ತಿ ಎಷ್ಟು ಶಸ್ತ್ರಾಸ್ತ್ರಗಳು ಬೇಕು ಎಂದು ಕೇಳಿದ್ದಾನೆ ಎಂದು ರಾಕೇಶ್ ಟಿಕೈಟ್ ಹೇಳಿದ್ದಾರೆ. ನಾನು ಮರು ಪ್ರಶ್ನೆ ಮಾಡಿದ ನಂತರ, ನಿಮ್ಮನ್ನು ಕೊಲ್ಲಲು ಎಷ್ಟು ಶಸ್ತ್ರಾಸ್ತ್ರಗಳನ್ನು ತರಬೇಕು ಎಂದು ಆರೋಪಿ ಪ್ರಶ್ನಿಸಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ.