ಶ್ರೀನಗರ (ಜಮ್ಮುಕಾಶ್ಮೀರ): ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ನಲ್ಲಿ ಹೊರ ರಾಜ್ಯದವರು ಭೂಮಿ ಖರೀದಿಸಲು ಅನುವಾಗುವಂತೆ ಹಲವು ಕಾನೂನುಗಳ ತಿದ್ದುಪಡಿಯನ್ನು ಕೇಂದ್ರ ಸರ್ಕಾರ ತಂದಿದೆ. ಈವರೆಗೆ ಕಣಿವೆ ರಾಜ್ಯದಲ್ಲಿ ಜಾರಿಯಲ್ಲಿದ್ದ 11 ಭೂ ಕಾಯ್ದೆಗಳನ್ನು ಕೇಂದ್ರ ಸರ್ಕಾರ ರದ್ದು ಪಡಿಸಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷಾಧಿಕಾರ ರದ್ದುಗೊಳಿಸಿ ವರ್ಷ ಕಳೆದ ಬಳಿಕ ಈ ತಿದ್ದುಪಡಿಗಳನ್ನು ತರಲಾಗಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಭೂಮಿ ಖರೀದಿಸಲು ಇರುವ, ಜಮ್ಮು ಮತ್ತು ಕಾಶ್ಮೀರ ಅಭಿವೃದ್ಧಿ ಕಾಯ್ದೆಯ ಸೆಕ್ಷನ್ 17ರಿಂದ ರಾಜ್ಯದ ಶಾಶ್ವತ ನಿವಾಸಿ ಅನ್ನೋದನ್ನ ಕೈ ಬಿಡಲಾಗಿದೆ.