ಕರ್ನಾಟಕ

karnataka

ETV Bharat / bharat

ಗಾಲ್ವಾನ್‌ನಲ್ಲಿ ಹುತಾತ್ಮರಾದ ಯೋಧರಿಗಾಗಿ ಲಡಾಖ್​ನಲ್ಲಿ ಯುದ್ಧ ಸ್ಮಾರಕ ನಿರ್ಮಾಣ - ಗಾಲ್ವಾನ್ ಘರ್ಷಣೆ

ಜೂನ್‌ನಲ್ಲಿ ಗಾಲ್ವಾನ್ ಕಣಿವೆಯಲ್ಲಿ ಚೀನಾದ ಸೈನಿಕರೊಂದಿಗೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾದ ಬಳಿಕ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದೆ..

galwan memorial
galwan memorial

By

Published : Oct 3, 2020, 3:07 PM IST

ಲಡಾಖ್ :ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನ್ಯದ ವಿರುದ್ಧ ಹೋರಾಡಿ ಹುತಾತ್ಮಾರಾಗಿರುವ 20 ಭಾರತೀಯ ಸೈನಿಕರಿಗಾಗಿ ಸ್ಮಾರಕ ನಿರ್ಮಿಸಲಾಗಿದೆ.

ಲಡಾಖ್‌ನ ಡರ್ಬುಕ್-ಶ್ಯೋಕ್-ದೌಲತ್ ಬೇಗ್ ಓಲ್ಡಿಯ ಕೆಎಂ-120 ಪೋಸ್ಟ್ ಬಳಿ ಸ್ಮಾರಕ ನಿರ್ಮಿಸಲಾಗಿದೆ. ಇದರಲ್ಲಿ 20 ಸೈನಿಕರ ಹೆಸರು ಮತ್ತು ಜೂನ್‌ 15ರ ಕಾರ್ಯಾಚರಣೆಯ ವಿವರಗಳಿವೆ.

ಫಿಂಗರ್ ಪ್ರದೇಶ, ಗಾಲ್ವಾನ್ ಕಣಿವೆ, ಹಾಟ್‌ ಸ್ಪ್ರಿಂಗ್ಸ್‌ ಮತ್ತು ಕೊಂಗ್ರಂಗ್ ನಲಾ ಸೇರಿ ಅನೇಕ ಪ್ರದೇಶಗಳಲ್ಲಿ ಭಾರತ ಮತ್ತು ಚೀನಾ ಸೇನೆಗಳ ನಡುವೆ ಏಪ್ರಿಲ್-ಮೇ ತಿಂಗಳಿನಿಂದ ಭಿನ್ನಾಭಿಪ್ರಾಯ ಮೂಡಿದ್ದವು.

ಜೂನ್‌ನಲ್ಲಿ ಗಾಲ್ವಾನ್ ಕಣಿವೆಯಲ್ಲಿ ಚೀನಾದ ಸೈನಿಕರೊಂದಿಗೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾದ ಬಳಿಕ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದೆ.

ABOUT THE AUTHOR

...view details