ಮುಜಾಫರನಗರ (ಯುಪಿ): ಕಳೆದೆರೆಡು ದಿನಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ವಧು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರಪ್ರದೇಶದ ಮುಜಾಫರನಗರದಲ್ಲಿ ನಡೆದಿದೆ.
ದಾಂಪತ್ಯ ಜೀವನಕ್ಕೆ ಕಾಲಿಟ್ಟು ಆಗಿದ್ದು ಎರಡೇ ದಿನ: ಆತ್ಮಹತ್ಯೆಗೆ ಶರಣಾದ ವಧು! - ಉತ್ತರಪ್ರದೇಶ ಮುಜಾಫರನಗರ
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಎರಡೇ ದಿನಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
![ದಾಂಪತ್ಯ ಜೀವನಕ್ಕೆ ಕಾಲಿಟ್ಟು ಆಗಿದ್ದು ಎರಡೇ ದಿನ: ಆತ್ಮಹತ್ಯೆಗೆ ಶರಣಾದ ವಧು! Woman commits suicide](https://etvbharatimages.akamaized.net/etvbharat/prod-images/768-512-7860729-827-7860729-1593681758599.jpg)
ಸಚಿನ್ ಎಂಬ 22 ವರ್ಷದ ಯುವಕನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ 21 ವರ್ಷದ ಯುವತಿ ನೇಹಾ, ಗಂಡನ ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಎರಡೂ ಕುಟುಂಬದವರ ಒಪ್ಪಿಗೆಯ ಮೇರೆಗೆ ಈ ಮದುವೆ ನಡೆದಿತ್ತು ಎಂಬ ಮಾಹಿತಿ ದೊರೆತಿದೆ. ಆದರೆ ದಿಢೀರ್ ಬೆಳವಣಿಗೆಯಲ್ಲಿ ವಧು ಸಾವಿನ ಹಾದಿ ತುಳಿದಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಈಕೆ ಸಾವನ್ನಪ್ಪಿರುವ ಸ್ಥಳದಲ್ಲಿ ಮರಣ ಪತ್ರ ಸಿಕ್ಕಿದ್ದು, ಅದರಲ್ಲಿ ನನ್ನ ಸಾವಿಗೆ ಯಾರೂ ಕಾರಣವಲ್ಲ. ನಮ್ಮ ಮನೆಯವರೆಲ್ಲರೂ ನಿರ್ದೋಷಿಗಳೆಂದು ಬರೆದಿದ್ದಾಳೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.