ಸೋನಿಪತ್(ಚಂಡೀಗಢ):ಮೇ.27ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ನವಜೋಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋನಿಪತ್ನ ಇಂಡಿಯನ್ ಕಾಲೋನಿಯಲ್ಲಿ ನಡೆದಿದ್ದು, ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಐದೇ ದಿನಕ್ಕೆ ನವಜೋಡಿ ಆತ್ಮಹತ್ಯೆಗೆ ಶರಣು! - ನವಜೋಡಿ ಆತ್ಮಹತ್ಯೆ
ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನವಜೋಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋನಿಪತ್ನಲ್ಲಿ ನಡೆದಿದೆ.
25 ವರ್ಷದ ಮಂಜಿತ್ ಹಾಗೂ 24 ವರ್ಷದ ಆರತಿ ಆತ್ಮಹತ್ಯೆಗೆ ಶರಣಾಗಿರುವ ಜೋಡಿ. ಮಂಜಿತ್ ಮೃತದೇಹ ರೈಲ್ವೇ ಹಳಿ ಮೇಲೆ ಹಾಗೂ ಆರತಿ ಮೃತದೇಹ ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸಿಕ್ಕಿದೆ. ಕಳೆದ ಕೆಲ ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿಗೆ ಎರಡು ಕುಟುಂಬದವರು ಸಮ್ಮತಿ ಸೂಚಿಸಿ ಮದುವೆ ಮಾಡಿದ್ದರು ಎನ್ನಲಾಗಿದೆ.
ಸೋನಿಪತ್ ಪೊಲೀಸ್ ಠಾಣೆ ಅಧಿಕಾರಿಗಳು ತಿಳಿಸಿರುವ ಪ್ರಕಾರ, ಎರಡು ಕುಟುಂಬದ ನಡುವೆ ಉಂಟಾದ ವೈಮನಸ್ಸಿನಿಂದ ಈ ನಿರ್ಧಾರ ತೆಗೆದುಕೊಂಡಿರಬಹುದು ಎನ್ನಲಾಗಿದೆ. ಆರತಿ ಕೋಣೆಯಿಂದ ಹೊರಬಾರದ ಕಾರಣ ಕುಟುಂಬಸ್ಥರು ಬಾಗಿಲು ಒಡೆದು ನೋಡಿದಾಗ ನೇಣಿಗೆ ಶರಣಾಗಿರುವುದು ಪತ್ತೆಯಾಗಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಮಂಜಿತ್ ಮೃತದೇಹ ಕೂಡ ಪತ್ತೆಯಾಗಿದೆ.