ನವದೆಹಲಿ:ಯಮುನಾ ನದಿಯ ತೀರದ ವೃಂದಾವನದಲ್ಲಿ ನಿರ್ಮಿಸಲಾಗಿರುವ ಅನಧಿಕೃತ ನಿರ್ಮಾಣಗಳ ವಿರುದ್ಧ ಕೈಗೊಂಡಿರುವ ಕ್ರಮಗಳ ಕುರಿತು ವರದಿ ನೀಡುವಂತೆ ಮಥುರಾ ಜಿಲ್ಲಾಧಿಕಾರಿಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ನಿರ್ದೇಶಿಸಿದೆ.
ಈ ಪ್ರದೇಶವು ನೀರಾವರಿ ಇಲಾಖೆಯ ನಿಯಂತ್ರಣದಲ್ಲಿದೆ ಮತ್ತು ಅಲ್ಲಿ ಯಾವುದೇ ನಿರ್ಮಾಣಕ್ಕೆ ಅನುಮತಿ ಇಲ್ಲ ಎಂದು ವೃಂದಾವನ ಅಭಿವೃದ್ಧಿ ಪ್ರಾಧಿಕಾರ ತಿಳಿಸಿದ ನಂತರ, ಎನ್‌ಜಿಟಿ ಅಧ್ಯಕ್ಷ ನ್ಯಾಯಮೂರ್ತಿ ಆದರ್ಶ್ ಕುಮಾರ್ ಗೋಯೆಲ್ ನೇತೃತ್ವದ ನ್ಯಾಯಪೀಠವು ಆಗಸ್ಟ್ 31 ರೊಳಗೆ ಇ-ಮೇಲ್ ಮೂಲಕ ವರದಿ ಸಲ್ಲಿಸುವಂತೆ ಡಿಸಿಗೆ ನಿರ್ದೇಶನ ನೀಡಿದೆ.