ಮುಂಬೈ (ಮಹಾರಾಷ್ಟ್ರ) : ಬ್ರಿಟನ್ ಸೇರಿದಂತೆ ಯೂರೋಪ್ನ ಹಲವು ದೇಶಗಳಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಹರಡುತ್ತಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಮಹಾರಾಷ್ಟ್ರ ಸರ್ಕಾರ ಈ ಜನವರಿ 5ರ ವರೆಗೆ ರಾತ್ರಿ ಕರ್ಫ್ಯೂ ಹೇರಿ ಆದೇಶ ನೀಡಿದೆ.
ಮುಂದಿನ 15 ದಿನಗಳವರೆಗೆ ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ ಇರಲಿದೆ. ಬುಧವಾರದಿಂದ ಬರುವ ಜನವರಿ 5ರ ವರೆಗೆ ರಾತ್ರಿ 11 ರಿಂದ ಬೆಳಗ್ಗೆ 6 ರವರೆಗೆ ರಾತ್ರಿ ಕರ್ಫ್ಯೂ ವಿಧಿಸುವುದಾಗಿ ರಾಜ್ಯ ಸರ್ಕಾರ ಸೋಮವಾರ ತಿಳಿಸಿದೆ.
ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳ ಮೂಲಕ ರಾಜ್ಯವನ್ನುದ್ದೇಶಿಸಿ ಮಾತನಾಡಿದ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಈ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ರಾತ್ರಿ ಕರ್ಫ್ಯೂ, ಲಾಕ್ಡೌನ್ ಬಗ್ಗೆ ಯಾವುದೇ ಯೋಚನೆ ಇಲ್ಲ: ಉದ್ಧವ್ ಠಾಕ್ರೆ
ಮಧ್ಯಪ್ರಾಚ್ಯ ಮತ್ತು ಯೂರೋಪ್‌ನಿಂದ ಬಂದವರಿಗೆ 14 ದಿನಗಳ ವರೆಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯಗೊಳಿಸಿದೆ. ಅಲ್ಲದೇ ಮುಂದಿನ ಆರು ತಿಂಗಳವರೆಗೆ ಕಡ್ಡಾಯ ಮಾಸ್ಕ್ ಧರಿಸುವುದನ್ನು ಸಹ ಮುಂದುವರಿಸಲಾಗಿದೆ ಎಂದು ಅವರು ಹೇಳಿದ್ದಾರೆ.