ಕರ್ನಾಟಕ

karnataka

ETV Bharat / bharat

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ: ನಾಳೆಯಿಂದ ವಿಚಾರಣೆ ಆರಂಭ - Sabarimala issue latest news

ಎಲ್ಲ ವಯೋಮಾನದ ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಅವಕಾಶ ನೀಡಬೇಕೆನ್ನುವ ಸುಪ್ರೀಂಕೋರ್ಟ್​ ತೀರ್ಪಿನ ಮರುಪರಿಶೀಲನೆ ಕೋರಿ ಸಲ್ಲಿಸಲಾಗಿರುವ 60 ಅರ್ಜಿಗಳ ವಿಚಾರಣೆಯನ್ನು ನಾಳೆಯಿಂದ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದಲ್ಲಿ 9 ನ್ಯಾಯಮೂರ್ತಿಗಳನ್ನೊಳಗೊಂಡ ಪೀಠವು ನಡೆಸಲಿದೆ.

Sabarimala issue latest news
ಶಬರಿಮಲೆ ವಿವಾದ

By

Published : Jan 12, 2020, 11:06 PM IST

ನವದೆಹಲಿ:ಎಲ್ಲ ವಯೋಮಾನದ ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಅವಕಾಶ ನೀಡಬೇಕೆನ್ನುವ ಸುಪ್ರೀಂಕೋರ್ಟ್​ ತೀರ್ಪಿನ ಮರುಪರಿಶೀಲನೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ನಾಳೆಯಿಂದ ಸುಪ್ರೀಂಕೋರ್ಟ್​ನ 9 ನ್ಯಾಯಮೂರ್ತಿಗಳನ್ನೊಳಗೊಂಡ ಪೀಠವು ನಡೆಸಲಿದೆ.

ಇದರ ಜೊತೆಗೆ ಮುಸ್ಲಿಂ ಮತ್ತು ಪಾರ್ಸಿ ಮಹಿಳೆಯರ ವಿರುದ್ಧ ತಾರತಮ್ಯ ಸೇರಿ ಇತರ ವಿವಾದಾತ್ಮಕ ವಿಷಯಗಳ ಕುರಿತೂ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ. ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಆರ್ ಬಾನುಮತಿ, ಅಶೋಕ್ ಭೂಷಣ್, ಎಲ್ ನಾಗೇಶ್ವರ ರಾವ್, ಎಂ ಎಂ ಶಾಂತನಗೌಡರ್, ಎಸ್ ಎ ನಜೀರ್, ಆರ್ ಸುಭಾಷ್ ರೆಡ್ಡಿ, ಬಿ ಆರ್ ಗವಾಯಿ ಮತ್ತು ಸೂರ್ಯ ಕಾಂತ್,​​ 60 ಅರ್ಜಿಗಳ ವಿಚಾರಣೆ ನಡೆಸಲಿದ್ದಾರೆ.

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಎಲ್ಲ ವಯೋಮಾನದ ಮಹಿಳೆಯರಿಗೆ ಅವಕಾಶ ನೀಡಬೇಕು ಎಂದು 2018ರಲ್ಲಿ ಆಗಿನ ಸಿಜೆಐ ದೀಪಕ್​ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ತೀರ್ಪು ನೀಡಿತ್ತು. ಪೂಜಾ ಸ್ಥಳಗಳಿಗೆ ಮಹಿಳೆಯರ ಪ್ರವೇಶ ಕೇವಲ ಹಿಂದೂಗಳ ದೇವಾಲಯಕ್ಕಷ್ಟೇ ಸೀಮಿತವಾಗಿಲ್ಲ. ಇದು ಎಲ್ಲಾ ಮಸೀದಿಗಳಿಗೆ ಮಹಿಳೆಯರ ಪ್ರವೇಶಕ್ಕೂ ಅನ್ವಯಿಸುತ್ತದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿತ್ತು.

ಆದರೆ, ಈ ತೀರ್ಪಿನ ಬಗ್ಗೆ ದೇಶಾದ್ಯಂತ ಪರ-ವಿರೋಧದ ಚರ್ಚೆಯಾಗಿತ್ತು. ತೀರ್ಪಿನ ಮರು ಪರಿಶೀಲನೆ ನಡೆಸಬೇಕು ಎಂದು ಕೋರ್ಟ್​ಗೆ ಸಾಕಷ್ಟು ಅರ್ಜಿಗಳು ಬಂದಿದ್ದವು. ಮರುಪರಿಶೀಲನಾ ಅರ್ಜಿಯನ್ನು ಅಂಗೀಕರಿಸಿದ ಕೋರ್ಟ್​, ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿತ್ತು. ಇದೀಗ ಜ.13 ರಿಂದ ಈ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್​ನ 9 ನ್ಯಾಯಮೂರ್ತಿಗಳನ್ನೊಳಗೊಂಡ ಪೀಠವು ನಡೆಸಲಿದೆ.

ABOUT THE AUTHOR

...view details