ನವದೆಹಲಿ:ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳ ಮರಣದಂಡನೆ ವಿರುದ್ಧದ ತಡೆಯಾಜ್ಞೆ ವಜಾಗೊಳಿಸಿರುವ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಮನವಿಯನ್ನು ಫೆಬ್ರವರಿ 11 ರಂದು ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂಕೋರ್ಟ್ ಹೇಳಿದೆ.
ಈ ಪ್ರಕರಣ ಸಂಬಂಧ ವಿಳಂಬವಾಗುತ್ತಿದೆ ಎಂದು ಸಾಲಿಟರ್ ಜನರಲ್ ತುಷಾರ್ ಮೆಹ್ತಾ ಕೇಂದ್ರ ಸರ್ಕಾರದ ಪರವಾಗಿ ನಾಲ್ವರಿಗೆ ನೋಟಿಸ್ ನೀಡುವಂತೆ ಅರ್ಜಿ ಸಲ್ಲಿಸಿದ್ದು, ಜಸ್ಟೀಸ್ ಭಾನುಮತಿ ನೇತೃತ್ವದ ಪೀಠ ತಿರಸ್ಕರಿಸಿದೆ.