ನವದೆಹಲಿ:ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಮುಖೇಶ್ ಸಲ್ಲಿಸಿದದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ತಿರಸ್ಕರಿಸಿದ್ದು, ಇದರ ವಿರುದ್ಧ ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿಯನ್ನು ತ್ವರಿತ ವಿಚಾರಣೆ ನಡೆಸಬೇಕೆಂದು ಅಪರಾಧಿ ಮುಖೇಶ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ತ್ವರಿತ ವಿಚಾರಣೆಗೆ ಕೋರ್ಟ್ ಸೂಚಿಸಿದೆ.
2012ರ ಡಿಸೆಂಬರ್ನಲ್ಲಿ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆದಿದ್ದು, ನಾಲ್ವರು ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿತ್ತು. ನಿರ್ಭಯಾ ಅತ್ಯಾಚಾರಿಗಳಿಗೆ ಜನವರಿ 7ರಂದು ದೆಹಲಿ ಕೋರ್ಟ್ ಡೆತ್ ವಾರೆಂಟ್ ಜಾರಿ ಮಾಡಿತ್ತು. ಜನವರಿ 22ರಂದು ನಾಲ್ವರನ್ನು ಗಲ್ಲಿಗೇರಿಸುವಂತೆ ಆದೇಶ ನೀಡಿತ್ತು. ಈ ಮಧ್ಯೆ ನಾಲ್ವರು ಅಪರಾಧಿಗಳು ಕಾನೂನು ಹೋರಾಟ ಮುಂದುವರೆಸಿದ್ದರು. ಅಪರಾಧಿ ಸಲ್ಲಿಸಿದ್ದ ಅರ್ಜಿಯೊಂದರ ವಿಚಾರಣೆ ನಡೆಸಿದ ದೆಹಲಿ ಕೋರ್ಟ್, ರಾಷ್ಟ್ರಪತಿ ತೀರ್ಮಾನ ಬರುವವರೆಗೂ ಗಲ್ಲು ಶಿಕ್ಷೆ ಮುಂದೂಡುವಂತೆ ಹೇಳಿತ್ತು.