ಕರ್ನಾಟಕ

karnataka

ETV Bharat / bharat

ನಿರ್ಭಯಾ ಪ್ರಕರಣ: ಅಪರಾಧಿ ಮುಖೇಶ್ ಸಿಂಗ್ ಸಲ್ಲಿಸಿದ್ದ ಅರ್ಜಿ ವಜಾ - ನಿರ್ಭಯಾ ಪ್ರಕರಣದ ಅಪರಾಧಿ ಮುಖೇಶ್ ಸಿಂಗ್ ಸಲ್ಲಿಸಿದ್ದ ಅರ್ಜಿ ವಜಾ

ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಮುಖೇಶ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ವಜಾಗೊಳಿಸಿದೆ.

Nirbhaya 2012 ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ
2012 ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ

By

Published : Mar 16, 2020, 4:37 PM IST

ನವದೆಹಲಿ: 2012ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳಲ್ಲಿ ಮುಖೇಶ್ ಸಿಂಗ್ ಅವರ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ಮತ್ತು ಎಂ ಆರ್ ಷಾ ಅವರನ್ನೊಳಗೊಂಡ ನ್ಯಾಯಪೀಠವು ಸಿಂಗ್ ಮನವಿ ಸಮರ್ಥನೀಯವಲ್ಲ ಎಂದು ಹೇಳಿದ್ದು, ಪರಿಶೀಲನಾ ಅರ್ಜಿ ಮತ್ತು ಕ್ಯುರೇಟಿವ್ ಅರ್ಜಿಯನ್ನು ವಜಾಗೊಳಿಸಲಾಗಿದೆ. ಹಿಂದಿನ ವಕೀಲ ವೃಂದಾ ಗ್ರೋವರ್ ತನ್ನನ್ನು ದಾರಿತಪ್ಪಿಸಿದ್ದಾನೆ ಎಂಬ ಕಾರಣಕ್ಕೆ ಅಪರಾಧಿ, ನ್ಯಾಯಾಲಯಗಳು ಜಾರಿಗೊಳಿಸಿದ ಎಲ್ಲ ಆದೇಶಗಳನ್ನು ರದ್ದುಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದನು.

ಮಾರ್ಚ್ 20, ಬೆಳಗ್ಗೆ 5.30 ಕ್ಕೆ ಅಪರಾಧಿಗಳಾದ ಮುಖೇಶ್ ಸಿಂಗ್ (32), ಪವನ್ ಗುಪ್ತಾ (25), ವಿನಯ್ ಶರ್ಮಾ (26) ಮತ್ತು ಅಕ್ಷಯ್ ಸಿಂಗ್ (31) ಅವರನ್ನು ಗಲ್ಲಿಗೇರಿಸಲು ವಿಚಾರಣಾ ನ್ಯಾಯಾಲಯ ಹೊಸ ಆದೇಶ ಹೊರಡಿಸಿದೆ.

For All Latest Updates

TAGGED:

ABOUT THE AUTHOR

...view details