ನವದೆಹಲಿ:ನ್ಯಾಷನಲ್ ಇನ್‍ಸ್ಟಿಟ್ಯೂಷನಲ್ ಶ್ರೇಯಾಂಕ ಫ್ರೇಮ್‍ವರ್ಕ್ (ಎನ್‍ಐಆರ್‌ಎಫ್) ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ-ಮದ್ರಾಸ್ (ಐಐಟಿ- ಮದ್ರಾಸ್) ಪ್ರಥಮ ಸ್ಥಾನ ಪಡೆದಿದ್ದು, ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ಹಾಗೂ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ- ದೆಹಲಿ ನಂತರದ ಸ್ಥಾನ ಪಡೆದಿವೆ.
ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ಶ್ರೇಯಾಂಕದ ಪಟ್ಟಿ ಬಿಡುಗಡೆ ಮಾಡಿದರು. ಭಾರತದ ಉನ್ನತ ವಿಶ್ವವಿದ್ಯಾಲಯಗಳ ಅಡಿಯಲ್ಲಿ ಐಐಎಸ್ಟಿ 84.18 ಅಂಕಗಳೊಂದಿಗೆ ಪ್ರಥಮ ಸ್ಥಾನದಲ್ಲಿದ್ದರೆ, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ 70.16 ಅಂಕಗಳ ಮೂಲದ ಎರಡನೇ ಸ್ಥಾನದಲ್ಲಿದೆ. ಬನಾರಸ್ ಹಿಂದೂ ವಿಶ್ವವಿದ್ಯಾಲಯ 63.15 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.
ದಕ್ಷಿಣ ಭಾರತದ ಪ್ರಥಮ ವಿವಿ ಮೈಸೂರು ವಿಶ್ವವಿದ್ಯಾನಿಲಯ 49.75ಬ ಅಂಕಗಳ 47ನೇ ಅತ್ಯುತ್ತಮ ಸಂಸ್ಥೆ ಎಂಬ ಹೆಗ್ಗಳಿಕೆ ಪಡೆದಿದೆ. ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಜೆಎಸ್ಎಸ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಆ್ಯಂಡ್ ರಿಸರ್ಚ್ ಸಂಸ್ಥೆಗಳು ಕ್ರಮವಾಗಿ 14, 33 ಮತ್ತು 54 ಸ್ಥಾನ ಪಡೆದಿವೆ.