ನವದೆಹಲಿ:ಈಗಾಗಲೇ ಬಡವರು, ವಲಸೆ ಕಾರ್ಮಿಕರು, ರೈತರು, ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಕೆಲವು ಕೊಡುಗೆಗಳನ್ನು ನೀಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಇಂದು ಮತ್ತೊಂದು ಪ್ಯಾಕೇಜ್ ಘೋಷಿಸಲಿದ್ದಾರೆ.
ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿರುವ ಸಚಿವೆ ನಿರ್ಮಲಾ ಸೀತಾರಾಮನ್, ಇಂದು ಯಾವ ವಲಯಕ್ಕೆ ಪ್ಯಾಕೇಜ್ ಘೋಷಿಸಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.