ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಭೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮಣಿಪುರದಲ್ಲಿ ಇಂದು 3000 ಕೋಟಿ ರೂಪಾಯಿಗಳ ವೆಚ್ಚದ 13 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಅಡಿಗಲ್ಲು ಹಾಕಲಿದ್ದಾರೆ. ಈ ವರ್ಚುವಲ್ ಕಾರ್ಯಕ್ರಮದ ಅಧ್ಯಕ್ಷತೆಯನ್ನ ಮಣಿಪುರದ ಮುಖ್ಯಮಂತ್ರಿ ಎನ್. ಬಿರೆನ್ ಸಿಂಗ್ ವಹಿಸಲಿದ್ದು, ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ವಿ. ಕೆ. ಸಿಂಗ್, ಸಂಸದರು, ಶಾಸಕರು ಮತ್ತು ಕೇಂದ್ರ ಮತ್ತು ರಾಜ್ಯದ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಈ ಯೋಜನೆಗಳು 316 ಕಿ. ಮೀ ಹೆದ್ದಾರಿಗಳ ನಿರ್ಮಾಣಕ್ಕಾಗಿ ರೂಪಿಸಲಾಗಿವೆ. " ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಮಣಿಪುರದ ಮುಖ್ಯಮಂತ್ರಿ ಎನ್. ಬಿರೆನ್ ಸಿಂಗ್ ಅವರು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಅಡಿಪಾಯ ಹಾಕಲಿದ್ದಾರೆ. ಅಷ್ಟೇ ಅಲ್ಲ ಸೋಮವಾರ ಬೆಳಗ್ಗೆ 11.30 ಕ್ಕೆ ರಸ್ತೆ ಸುರಕ್ಷತಾ ಯೋಜನೆಯನ್ನು ಸಹ ಉದ್ಘಾಟಿಸಲಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಕೇಂದ್ರ ಭೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಮಣಿಪುರ ನವ ಭಾರತದ ಅಭಿವೃದ್ಧಿಯ ಹಾದಿಯಲ್ಲಿ ಪ್ರಗತಿ ಸಾಧಿಸಲಿದೆ ಎಂದಿದ್ದಾರೆ.