ಪಾಟ್ನಾ (ಬಿಹಾರ):ಮುಖ್ಯಮಂತ್ರಿ ನಿತೀಶ್‌ಕುಮಾರ್ ನೇತೃತ್ವದ ಬಿಹಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಆರ್ಜೆಡಿ ಮುಖಂಡ ತೇಜಸ್ವಿ ಯಾದವ್, ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಹಾಗೂ ಅನೈತಿಕ ಚಟುವಟಿಕೆಗಳ ಬಗ್ಗೆ ಮಾತನಾಡಬೇಕು ಎಂದಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆ ಕಣದ ಬಿಸಿ ಹೆಚ್ಚಾಗುತ್ತಿದೆ. ಮುಖ್ಯಮಂತ್ರಿ ನಿತೀಶ್‌ಕುಮಾರ್ ಇಂದು ರಾಜ್ಯದ ಜನರನ್ನು ಉದ್ದೇಶಿಸಿ ಭಾಷಣ ಮಾಡಿದ ಬಳಿಕ ತೇಜಶ್ವಿ ಯಾದವ್ ಹಲವು ಪ್ರಶ್ನೆಗಳನ್ನು ಹಾಕಿದ್ದಾರೆ. ಬಿಹಾರ ಸರ್ಕಾರ ರಾಜ್ಯದ ಜನರನ್ನು ಭಯದ ವಾತಾವರಣದಲ್ಲಿಡಲು ಬಯಸುತ್ತಿದೆ.