ನವದೆಹಲಿ: ಐಎಎಸ್ ನಿತೀಶ್ವರ್ ಕುಮಾರ್ ಅವರನ್ನು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ಗೆ ನೂತನ ಪ್ರಧಾನ ಕಾರ್ಯದರ್ಶಿ ನೇಮಕ - ಐಎಎಸ್ ನಿತೀಶ್ವರ್ ಕುಮಾರ್
ಐಎಎಸ್ ಅಧಿಕಾರಿ ನಿತೀಶ್ವರ್ ಕುಮಾರ್ ಅವರು ಐಎಎಸ್ ಅಧಿಕಾರಿ ಬಿಪುಲ್ ಪಾಠಕ್ ಬದಲಿಗೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
nithishwar kumar
ಲೆಫ್ಟಿನೆಂಟ್ ಗವರ್ನರ್ ಪ್ರಧಾನ ಕಾರ್ಯದರ್ಶಿಯಾಗಿ ಈ ಹಿಂದೆ ಸೇವೆ ಸಲ್ಲಿಸುತ್ತಿದ್ದ ಐಎಎಸ್ ಅಧಿಕಾರಿ ಬಿಪುಲ್ ಪಾಠಕ್ ಅವರನ್ನು ವರ್ಗಾವಣೆ ಮಾಡಿರುವ ಸರ್ಕಾರ, ಅವರನ್ನು ಮಾಹಿತಿ ತಂತ್ರಜ್ಞಾನ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ.
ಜೊತೆಗೆ ಸರ್ಕಾರದ ಆದೇಶದಂತೆ ಬಿಪುಲ್ ಪಾಠಕ್, ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಮುಖ್ಯ ಕಾರ್ಯದರ್ಶಿ, ಜಮ್ಮು ಮತ್ತು ಕಾಶ್ಮೀರದ ಇ-ಆಡಳಿತ ಸಂಸ್ಥೆಯ ಸಿಇಒ ಮತ್ತು ಜಮ್ಮು ಮತ್ತು ಕಾಶ್ಮೀರ ಇಂಧನ ಅಭಿವೃದ್ಧಿ ಸಂಸ್ಥೆಯ ಸಿಇಒ ಆಗಿ ಹೆಚ್ಚುವರಿ ಜವಾಬ್ದಾರಿಯಲ್ಲಿ ಮುಂದುವರೆಯಲಿದ್ದಾರೆ.