ನವದೆಹಲಿ :10 ಮತ್ತು 12 ನೇ ತರಗತಿಯ ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳನ್ನು ಜನವರಿ - ಫೆಬ್ರವರಿಯಲ್ಲಿ ನಡೆಸುವುದಿಲ್ಲ. ಪರೀಕ್ಷೆ ನಡೆಸುವ ಕುರಿತು ಫೆಬ್ರವರಿಯಲ್ಲಿ ನಿರ್ಧರಿಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ.
ಪರೀಕ್ಷೆಗಳು ರದ್ದಾಗಲ್ಲ, ಮುಂದೂಡಲ್ಪಡುತ್ತವೆ :

ಮುಂಬರುವ ಬೋರ್ಡ್ ಪರೀಕ್ಷೆಗಳ ಕುರಿತು ವೆಬ್ನಾರ್ ಮೂಲಕ ಶಿಕ್ಷಕರೊಂದಿಗೆ ಸಂವಾದ ನಡೆಸಿದ ಅವರು, ಈ ವಿಷಯವನ್ನು ಹೇಳಿದ್ದಾರೆ. ಪರೀಕ್ಷೆಗಳನ್ನು ರದ್ದುಗೊಳಿಸುವುದು ಮತ್ತು ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳನ್ನು ಪಾಸ್ ಮಾಡುವುದು ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟು ಮಾಡಲಿದೆ. ಈ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉನ್ನತ ಶಿಕ್ಷಣಕ್ಕೆ ಪ್ರವೇಶ ಮತ್ತು ಉದ್ಯೋಗ ಪಡೆಯುಲು ತೊಂದರೆ ಎದುರಿಸಬೇಕಾಗುತ್ತದೆ. ನಮ್ಮ ವಿದ್ಯಾರ್ಥಿಗಳಿಗೆ ನಾವು ಅದನ್ನು ಬಯಸುವುದಿಲ್ಲ. ಹೀಗಾಗಿ, ಪರೀಕ್ಷೆಗಳನ್ನು ರದ್ದು ಮಾಡುವುದಿಲ್ಲ. ಬೋರ್ಡ್ ಪರೀಕ್ಷೆಗಳು ನಡೆಯುತ್ತವೆ, ಆದರೆ ಮುಂದೂಡಲ್ಪಡುತ್ತವೆ. ಜನವರಿ, ಫೆಬ್ರವರಿಯಲ್ಲಿ 10 ಮತ್ತು 12 ನೇ ತರಗತಿ ಪರೀಕ್ಷೆಗಳು ನಡೆಯುವುದಿಲ್ಲ. ಪರೀಕ್ಷೆಗಳು ಯಾವಾಗ ನಡೆಯುತ್ತವೆ ಎಂಬುವುದನ್ನು ಫೆಬ್ರವರಿ ನಂತರ ನಿರ್ಧರಿಸಲಾಗುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಡಿ.22ಕ್ಕೆ ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳ ವೇಳಾಪಟ್ಟಿ ನಿರೀಕ್ಷೆ
ಅನೇಕ ದೇಶಗಳು ಸಂಪೂರ್ಣ ಶೈಕ್ಷಣಿಕ ವರ್ಷವನ್ನು ರದ್ದುಗೊಳಿಸಿವೆ. ಆದರೆ, ನಮ್ಮ ಶಿಕ್ಷಕರು ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ, ನಾವು ಯಾವುದೇ ವಿದ್ಯಾರ್ಥಿಯ ಶೈಕ್ಷಣಿಕ ವರ್ಷವನ್ನು ವ್ಯರ್ಥ ಮಾಡಲು ಅವಕಾಶ ನೀಡುವುದಿಲ್ಲ. ಈ ಕಠಿಣ ಸಮಯದಲ್ಲಿ ದೇಶಾದ್ಯಂತ 33 ಕೋಟಿ ವಿದ್ಯಾರ್ಥಿಗಳಿಗೆ ಪಾಠ ಮಾಡಲು ಶಿಕ್ಷಕರು ಕೊರೊನಾ ಯೋಧರಿಗಿಂತ ಕಡಿಮೆಯಿಲ್ಲಂತೆ ಕೆಲಸ ಮಾಡಿದ್ದಾರೆ ಎಂದು ಶಿಕ್ಷಣ ಸಚಿವರು ಹೇಳಿದರು.