ನವದೆಹಲಿ:ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ನವದೆಹಲಿಯ ಸೇನಾ ಸಂಶೋಧನಾ ಮತ್ತು ರೆಫೆರಲ್ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯದಲ್ಲಿ ಯಥಾಸ್ಥಿತಿ: ಆಸ್ಪತ್ರೆ ಸ್ಪಷ್ಟನೆ
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಆಸ್ಪತ್ರೆ ತನ್ನ ವೈದ್ಯಕೀಯ ವರದಿಯಲ್ಲಿ ಸ್ಪಷ್ಟನೆ ನೀಡಿದೆ.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ
ಪ್ರಣಬ್ ಮುಖರ್ಜಿ ಅವರನ್ನು ಆ.10ರಂದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೆದುಳಿನಲ್ಲಿ ಹೆಪ್ಪುಗಟ್ಟಿದ ರಕ್ತವನ್ನು ತೆಗೆದುಹಾಕಲು ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಸದ್ಯಕ್ಕೆ 84 ವರ್ಷದ ಪ್ರಣಬ್ ಮುಖರ್ಜಿ ಕೋಮಾ ಸ್ಥಿತಿಯಲ್ಲಿದ್ದು, ಅಂದಿನಿಂದಲೂ ಇದೇ ಸ್ಥಿತಿಯಲ್ಲಿ ಮುಂದುವರೆದಿದ್ದಾರೆ. ಜೊತೆಗೆ ಇವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಸದ್ಯಕ್ಕೆ ವೆಂಟಿಲೇಟರ್ ಮೂಲಕ ಆಮ್ಲಜನಕ ಪೂರೈಕೆ ಮಾಡಲಾಗುತ್ತಿದ್ದು, ಆರೋಗ್ಯದಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಆಸ್ಪತ್ರೆ ತನ್ನ ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಿದೆ.