ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಬಂಧ ಸಂಪೂರ್ಣ ಹದಗೆಟ್ಟಿದ್ದು ಈ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ವೇಳೆಯ ಗಡಿಯಲ್ಲಿ ಸಂಪ್ರದಾಯವೊಂದು ಈ ಬಾರಿ ಇರುವುದಿಲ್ಲ ಎಂದು ತಿಳಿದು ಬಂದಿದೆ.
ಉಭಯ ದೇಶಗಳ ಸಂಬಂಧ ವಿಷಮವಾದ ಹಿನ್ನೆಲೆಯಲ್ಲಿ ವಾಘಾ-ಅಟ್ಟಾರಿ ಗಡಿಯಲ್ಲಿ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ವೇಳೆ ಸಿಹಿತಿಂಡಿ ವಿನಿಮಯ ಇರುವುದಿಲ್ಲ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ.