ನವದೆಹಲಿ:ಈಗಾಗಲೇ ಜಾರಿಗೊಂಡಿರುವ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿರುವುದರ ಮಧ್ಯೆಯೇ ಕೇಂದ್ರ ಸರ್ಕಾರ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ಯೋಜನೆಗೆ ಸಂಪುಟದಲ್ಲಿ ಅನುಮೋದನೆ ನೀಡಿದೆ. ಇದೇ ವಿಷಯವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿದ್ದಾರೆ.
ಖಾಸಗಿ ಸುದ್ದಿವಾಹಿನಿಗೆ ನೀಡಿರುವ ಸಂದರ್ಶನವೊಂದರಲ್ಲಿ ಭಾಗಿಯಾಗಿ ಮಾತನಾಡಿರುವ ಅಮಿತ್ ಶಾ ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ನಡುವೆ ಯಾವುದೇ ರೀತಿಯ ಸಂಬಂಧವಿಲ್ಲ. ಎನ್ಆರ್ಸಿ ಬಗ್ಗೆ ಚರ್ಚೆ ಮಾಡುವಂತಹ ಅವಶ್ಯಕತೆ ಇಲ್ಲ. ಪ್ರಧಾನಿ ಮೋದಿಯವರು ತೆಗೆದುಕೊಂಡಿರುವ ನಿರ್ಧಾರ ಸರಿಯಾಗಿದೆ. ಈ ವಿಷಯದ ಬಗ್ಗೆ ಪಾರ್ಲಿಮೆಂಟ್ ಅಥವಾ ಕ್ಯಾಬಿನೆಟ್ನಲ್ಲಿ ಚರ್ಚೆ ನಡೆಸುವ ಅವಶ್ಯಕತೆ ಇಲ್ಲ ಎಂದು ಅವರು ತಿಳಿಸಿದ್ದಾರೆ.