ನವದೆಹಲಿ:ಕೃಷಿ ಮಸೂದೆ ವಿರೋಧಿಸಿ ನಡೆಯುತ್ತಿರುವ ದೆಹಲಿ ಚಲೋ ಆಂದೋಲನಕ್ಕೆ ಭಾರತವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಬಲ ದೊರಕಿದೆ. ಆದರೆ ಈ ನಡುವೆ ರೈತ ಸಂಘಟನೆಯ ಮುಖಂಡರು ದೇಶದ ರೈತರ ಹೋರಾಟ ಆಂತರಿಕ ವಿಚಾರವಾಗಿದೆ. ದೇಶದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಹೊರಗಿನ ಯಾವುದೇ ವ್ಯಕ್ತಿಗೆ ಅವಕಾಶವಿಲ್ಲ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.
ದೆಹಲಿ-ಮಧ್ಯಪ್ರದೇಶದ ಸಿಂಘು ಗಡಿ ಭಾಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೈತ ಮುಖಂಡ ಶಿವ ಕುಮಾರ್ ಕಾಕಜ್ಜಿ, ಸರ್ಕಾರ ಜಾರಿ ಮಾಡಿದ ಮೂರು ಕೃಷಿ ಮಸೂದೆಗಳನ್ನು ಹಿಂಪಡೆಯುವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದಿದ್ದಾರೆ.