ನಾಗ್ಪುರ:ಗಣರಾಜ್ಯೋತ್ಸವದ ದಿನ ರೈತರ ಟ್ರ್ಯಾಕ್ಟರ್ ಪರೇಡ್ ವೇಳೆ ಕೆಂಪು ಕೋಟೆಯಲ್ಲಿ ನಡೆದ ಘಟನೆಯನ್ನು ಆರ್ಎಸ್ಎಸ್ ಖಂಡಿಸಿದೆ.
ದೆಹಲಿಯಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯು ದುಃಖಕರ ಮತ್ತು ಖಂಡನೀಯವಾಗಿದೆ. ಕೆಂಪು ಕೋಟೆಯಲ್ಲಿ ನಡೆದದ್ದು ಸ್ವಾತಂತ್ರ್ಯ ಹೋರಾಟಗಾರರು ಮತ್ತು ರಾಷ್ಟ್ರದ ಸಮಗ್ರತೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದವರಿಗೆ ಮಾಡಿದ ಅವಮಾನವಾಗಿದೆ. ಪ್ರಜಾಪ್ರಭುತ್ವದಲ್ಲಿ ಇಂತಹ ಅರಾಜಕತೆಗೆ ಅವಕಾಶವಿಲ್ಲ ಎಂದು ಆರ್ಎಸ್ಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುರೇಶ್ ಭಯಾಜಿ ಜೋಶಿ ಹೇಳಿದ್ದಾರೆ.