ಕರ್ನಾಟಕ

karnataka

ETV Bharat / bharat

ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಲಾಕ್​ಡೌನ್​ ಇಲ್ಲ.. ಸಿಎಂ ಕೇಜ್ರಿವಾಲ್ ಸ್ಪಷ್ಟನೆ - ಅರವಿಂದ್ ಕೇಜ್ರಿವಾಲ್ ಲೇಟೆಸ್ಟ್ ನ್ಯೂಸ್

ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಂತ್ರಿ ಅರವಿಂದ ಕೇಜ್ರಿವಾಲ್, ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಮತ್ತು ಮೂವರು ಮೇಯರ್‌ಗಳೊಂದಿಗೆ ಸಭೆ ನಡೆಸಿ ಕೋವಿಡ್-19 ಪರಿಸ್ಥಿತಿಯನ್ನು ಎದುರಿಸುವ ಕಾರ್ಯತಂತ್ರದ ಬಗ್ಗೆ ಚರ್ಚಿಸಿದರು.

No plan for another lockdown in Delhi
ಕೇಜ್ರಿವಾಲ್ ಸ್ಪಷ್ಟನೆ

By

Published : Jun 15, 2020, 5:56 PM IST

ನವದೆಹಲಿ :ರಾಷ್ಟ್ರ ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದ್ದರೂ ಮತ್ತೊಂದು ಲಾಕ್​ಡೌನ್ ಮಾಡುವ ಯೋಜನೆ ಇಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.

ದೆಹಲಿಯಲ್ಲಿ ಮತ್ತೊಂದು ಲಾಕ್​ಡೌನ್ ಘೋಷಣೆ ಮಾಡಲಾಗುತ್ತದೆ ಎಂದು ಅನೇಕ ಜನರು ಊಹಿಸುತ್ತಿದ್ದಾರೆ. ಅಂತಹ ಯಾವುದೇ ಯೋಜನೆಗಳಿಲ್ಲ ಎಂದು ಕೇಜ್ರಿವಾಲ್ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಂತ್ರಿ ಅರವಿಂದ ಕೇಜ್ರಿವಾಲ್, ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಮತ್ತು ಮೂವರು ಮೇಯರ್‌ಗಳೊಂದಿಗೆ ಸಭೆ ನಡೆಸಿ ಕೋವಿಡ್-19 ಪರಿಸ್ಥಿತಿಯನ್ನು ಎದುರಿಸುವ ಕಾರ್ಯತಂತ್ರದ ಬಗ್ಗೆ ಚರ್ಚಿಸಿದರು.

ರಾಷ್ಟ್ರ ರಾಜಧಾನಿಯಲ್ಲಿ ಈವರೆಗೆ 41 ಸಾವಿರಕ್ಕಿಂತಲೂ ಅಧಿಕ ಕೊರೊನಾ ಪ್ರಕರಣ ಪತ್ತೆಯಾಗಿವೆ. 1,327 ಜನ ಮಾರಕ ಸೋಂಕಿಗೆ ಬಲಿಯಾಗಿದ್ದಾರೆ.

ABOUT THE AUTHOR

...view details