ಕರ್ನಾಟಕ

karnataka

ETV Bharat / bharat

ನಾಗರಿಕ ಸೇವಾ ಪರೀಕ್ಷೆಯಿಂದ ಸಿಎಸ್​ಎಟಿ ಕೈಬಿಡುವ ಯೋಚನೆ ಇಲ್ಲ: ಕೇಂದ್ರ ಸ್ಪಷ್ಟನೆ

ನಾಗರಿಕ ಸೇವಾ ಪರೀಕ್ಷೆಯನ್ನು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್​ಸಿ) ವಾರ್ಷಿಕವಾಗಿ ಮೂರು ಹಂತಗಳಲ್ಲಿ ಅಂದರೆ ಪ್ರಾಥಮಿಕ, ಮುಖ್ಯ ಮತ್ತು ಸಂದರ್ಶನದ ಮೂಲಕ ನಡೆಸುತ್ತದೆ. ಸಿಎಸ್ಎಟಿ ನಾಗರಿಕ ಸೇವೆಗಳ ಪ್ರಾಥಮಿಕ ಪರೀಕ್ಷೆಯ ಭಾಗವಾಗಿದೆ.

exam
exam

By

Published : Sep 17, 2020, 3:15 PM IST

ನವದೆಹಲಿ: ನಾಗರಿಕ ಸೇವಾ ಪರೀಕ್ಷೆಯಿಂದ ಸಿವಿಲ್ ಸರ್ವೀಸಸ್ ಆಪ್ಟಿಟ್ಯೂಡ್ ಟೆಸ್ಟ್ (ಸಿಎಸ್ಎಟಿ) ಕೈಬಿಡುವ ಯೋಚನೆ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ನಾಗರಿಕ ಸೇವಾ ಪರೀಕ್ಷೆಯನ್ನು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್​ಸಿ) ವಾರ್ಷಿಕವಾಗಿ ಮೂರು ಹಂತಗಳಲ್ಲಿ ಅಂದರೆ ಪ್ರಾಥಮಿಕ, ಮುಖ್ಯ ಮತ್ತು ಸಂದರ್ಶನದ ಮೂಲಕ ನಡೆಸುತ್ತದೆ.

ಇದೇ ಆಧಾರದ ಮೇಲೆ ಭಾರತೀಯ ಆಡಳಿತ ಸೇವೆ (ಐಎಎಸ್), ಭಾರತೀಯ ವಿದೇಶ ಸೇವೆ (ಐಎಫ್‌ಎಸ್) ಮತ್ತು ಭಾರತೀಯ ಪೊಲೀಸ್ ಸೇವೆಗೆ (ಐಪಿಎಸ್) ಅಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತದೆ. ಸಿಎಸ್ಎಟಿ ನಾಗರಿಕ ಸೇವೆಗಳ ಪ್ರಾಥಮಿಕ ಪರೀಕ್ಷೆಯ ಭಾಗವಾಗಿದೆ.

ಸಿಎಸ್ಎಟಿಯನ್ನು ಕೈಬಿಡಲಾಗುತ್ತದೆಯೇ ಎನ್ನುವ ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಗೆ ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಪ್ರತಿಕ್ರಿಯಿಸಿ, ಇಲ್ಲ ಎಂದು ಲಿಖಿತ ರೂಪದಲ್ಲಿ ಉತ್ತರಿಸಿದ್ದಾರೆ.

ABOUT THE AUTHOR

...view details