ನವದೆಹಲಿ:ಸದ್ಯ ದೇಶದಲ್ಲಿ ಹೇರಿರುವ ಲಾಕ್ ಡೌನ್ ಅವಧಿಯನ್ನು ವಿಸ್ತರಿಸುವ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕೇಂದ್ರ ಸಂಪುಟ ಕಾರ್ಯದರ್ಶಿ ರಾಜಿವ್ ಗೌಬಾ ಸ್ಪಷ್ಟನೆ ನೀಡಿದ್ದಾರೆ.
ಲಾಕ್ ಡೌನ್ ಅವಧಿ ವಿಸ್ತರಣೆ ಇಲ್ಲ... ಮಾಧ್ಯಮಗಳ ವರದಿಗೆ ಸ್ಪಷ್ಟನೆ ನೀಡಿದ ರಾಜೀವ್ ಗೌಬಾ - Rajiv Gauba
ಲಾಕ್ಡೌನ್ ವಿಸ್ತರಣೆಯಾಗುವ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿರುವ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ಸಂಪುಟ ಕಾರ್ಯದರ್ಶಿ ರಾಜಿವ್ ಗೌಬಾ, ಲಾಕ್ ಡೌನ್ ಅವಧಿಯನ್ನು ವಿಸ್ತರಿಸುವ ಕುರಿತು ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.
ರಾಜಿವ್ ಗೌಬಾ
ಲಾಕ್ಡೌನ್ ವಿಸ್ತರಣೆಯಾಗುವ ಕುರಿತು ಮಾಧ್ಯಮಗಳಲ್ಲಿ ಬಿತ್ತರವಾಗಿರುವ ಸುದ್ದಿಗಳನ್ನು ಕೇಳಿ ನನಗೆ ಆಶ್ಚರ್ಯವಾಗಿದೆ. ಆದರೆ ಅಂತಹ ಯಾವುದೇ ಯೋಜನೆ ಸದ್ಯ ಸರ್ಕಾರಕ್ಕಿಲ್ಲ ಎಂದು ಗೌಬಾ ತಿಳಿಸಿದ್ದಾರೆ.
ಸದ್ಯ ದೇಶದಲ್ಲಿ 21 ದಿನಗಳ ಲಾಕ್ಡೌನ್ ಹೇರಲಾಗಿದೆ. ಈ ಅವಧಿ ಏಪ್ರಿಲ್ 14ಕ್ಕೆ ಮುಕ್ತಾಯಗೊಳ್ಳಲಿದ್ದು, ಪರಿಸ್ಥಿತಿಯ ನಿಯಂತ್ರಣವನ್ನು ಅವಲೋಕಿಸಿ ಕೇಂದ್ರ ಸರ್ಕಾರ ಮತ್ತು ಆಯಾ ರಾಜ್ಯ ಸರ್ಕಾರಗಳು ಮುಂದಿನ ನಿರ್ಧಾರ ಕೈಗೊಳ್ಳಲಿವೆ ಎಂದು ಹೇಳಿದರು.