ನವದೆಹಲಿ : ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ ಪಡೆದ ಭಾರತೀಯ ಮೂಲದ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಜೊತೆ ಮಾತುಕತೆ ನಡೆಸಿದ ಪ್ರಧಾನಿ ಮೋದಿ, ತಮ್ಮ ಸಂತಸವನ್ನು ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಮೋದಿ ಭೇಟಿ ಮಾಡಿದ ಅಭಿಜಿತ್ ಬ್ಯಾನರ್ಜಿ: ಟ್ವಿಟ್ಟರ್ನಲ್ಲಿ ಪ್ರಶಂಸೆ - Nobel Laureate Abhijit Banerjee latest news
"ಮಾನವ ಸಬಲೀಕರಣದ ಬಗ್ಗೆ ಅಭಿಜಿತ್ ಬ್ಯಾನರ್ಜಿಯವರಿಗೆ ಇರುವ ಅತೀವ ಉತ್ಸಾಹ ಸ್ಪಷ್ಟವಾಗಿ ಕಾಣುತ್ತಿದೆ. ನಾವು ವಿವಿಧ ವಿಚಾರಗಳ ಬಗ್ಗೆ ಆರೋಗ್ಯಕರ ಮತ್ತು ವಿಸ್ತೃತ ಸಂವಾದ ನಡೆಸಿದೆವು. ಅವರ ಸಾಧನೆಯ ಬಗ್ಗೆ ಇಡೀ ಭಾರತವೇ ಹೆಮ್ಮೆ ಪಡುತ್ತದೆ.": ಪ್ರಧಾನಿ ಮೋದಿ
ಮೋದಿ ಭೇಟಿ ಮಾಡಿದ ಅಭಿಜಿತ್ ಬ್ಯಾನರ್ಜಿ
ಮಾನವ ಸಬಲೀಕರಣದ ಬಗೆಗೆ ಅಭಿಜಿತ್ ಬ್ಯಾನರ್ಜಿಯವರಿಗೆ ಇರುವ ಅತೀವ ಉತ್ಸಾಹ ಸ್ಪಷ್ಟವಾಗಿ ಕಾಣುತ್ತಿದೆ. ನಾವು ವಿವಿಧ ವಿಚಾರಗಳ ಬಗ್ಗೆ ಆರೋಗ್ಯಕರ ಮತ್ತು ವಿಸ್ತೃತ ಸಂವಾದ ನಡೆಸಿದೆವು. ಅವರ ಸಾಧನೆಯ ಬಗ್ಗೆ ಇಡೀ ಭಾರತವೇ ಹೆಮ್ಮೆ ಪಡುತ್ತದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಬ್ಯಾನರ್ಜಿಯವರ ಮುಂದಿನ ಪ್ರಯತ್ನಗಳಿಗೆ ಪ್ರಧಾನಿ ಶುಭ ಹಾರೈಸಿದ್ದಾರೆ.