ನಿಜಾಮಾಬಾದ್:ಲೋಕಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಕಾವೇರುತ್ತಿದ್ದು ಒಂದಷ್ಟು ವಿಚಾರಗಳಿಂದ ಕೆಲ ಕ್ಷೇತ್ರಗಳು ದೇಶದಲ್ಲೇ ಗಮನ ಸೆಳೆಯುತ್ತಿವೆ.
ತೆಲಂಗಾಣದ ನಿಜಾಮಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಬರೋಬ್ಬರಿ 230ಕ್ಕೂ ಹೆಚ್ಚು ನಾಮಪತ್ರ ಸಲ್ಲಿಕೆಯಾಗಿವೆ. ನಿಜಾಮಾಬಾದ್ ಕ್ಷೇತ್ರದಲ್ಲಿ ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್ ಪುತ್ರಿ ಕಲ್ವಕುಂಟ್ಲ ಕವಿತಾ ಕಣಕ್ಕಿಳಿದಿದ್ದಾಳೆ.
ನಿಜಾಮಾಬಾದ್ ಕ್ಷೇತ್ರದಲ್ಲಿ 230ಕ್ಕೂ ಅಧಿಕ ನಾಮಪತ್ರ ಸಲ್ಲಿಕೆ ಕವಿತಾ ವಿರುದ್ಧ 190ಕ್ಕೂ ಹೆಚ್ಚಿನ ರೈತರು ತಮ್ಮ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ತಮ್ಮ ಬೆಳೆಗಳಿಗೆ ಸಮರ್ಪಕವಾಗಿ ಸಬ್ಸಿಡಿ ನೀಡಿಲ್ಲ ಎನ್ನುವ ಕಾರಣಕ್ಕೆ ರೈತರು ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ.
230ಕ್ಕೂ ಹೆಚ್ಚಿನ ನಾಮಪತ್ರ ಸಲ್ಲಿಕೆ ಹಾಗೂ ಸಿಎಂ ಪುತ್ರಿಯ ಸ್ಪರ್ಧೆಯಿಂದ ನಿಜಾಮಾಬಾದ್ ಲೋಕಸಭಾ ಕ್ಷೇತ್ರ ದೇಶದಲ್ಲೇ ಸಾಕಷ್ಟು ಕುತೂಹಲ ಮೂಡಿಸಿದೆ.