ಕರ್ನಾಟಕ

karnataka

ETV Bharat / bharat

ದೆಹಲಿ ಹಿಂಸಾಚಾರಕ್ಕೆ ಬಲಿಯಾದವರ ಸಂಖ್ಯೆ 38 ಕ್ಕೆ ಏರಿಕೆ - ದೆಹಲಿ ಹಿಂಸಾಚಾರ

ಹಿಂಸಾಚಾರಕ್ಕೆ ತಿರುಗಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯಲ್ಲಿ ಮೃತಪಟ್ಟವರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.

North East Delhi violence
ದೆಹಲಿ ಹಿಂಸಾಚಾರಕ್ಕೆ ಬಲಿಯಾದವರ ಸಂಖ್ಯೆ 38 ಕ್ಕೆ ಏರಿಕೆ

By

Published : Feb 27, 2020, 8:23 PM IST

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.

ದೆಹಲಿಯ ಈಶಾನ್ಯ ಭಾಗದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಈ ವೇಳೆ, ನೂರಾರು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸಿದೆ ದೆಹಲಿಯ ಜಿಟಿಬಿ ಆಸ್ಪತ್ರೆಯಲ್ಲಿ 34, ಎಲ್​ಎನ್​​​ಜೆಪಿಯಲ್ಲಿ 3 ಹಾಗೂ ಜಗ ಪರ್ವೇಶ್ ಚಂದರ್ ಆಸ್ಪತ್ರೆಯಲ್ಲಿ ಒಬ್ಬರು ಮೃತಪಟ್ಟಿದ್ದು, ಒಟ್ಟು 38 ಮಂದಿ ಬಲಿಯಾದಂತಾಗಿದೆ.

ಈಶಾನ್ಯ ದೆಹಲಿಯ ಕಾರ್ವಾಲ್, ಮೋಜ್‌ಪುರ್, ಭಜನಪುರ, ವಿಜಯಾ ಪಾರ್ಕ್‌ಗಳಲ್ಲಿ ಹಿಂಸಾಚಾರ ತೀವ್ರಗೊಂಡಿದ್ದು, ವಾಹನಗಳಿಗೆ ಬೆಂಕಿ ಹಾಗೂ ಕಲ್ಲು ತೂರಾಟ ನಡೆಸಲಾಗಿತ್ತು. ದೆಹಲಿಯ ಕೆಲ ಸೂಕ್ಷ್ಮ ಪ್ರದೇಶಗಳಲ್ಲಿ ಒಂದು ತಿಂಗಳವರೆಗೆ ಸೆಕ್ಷನ್ 144 ​ ಜಾರಿ ಮಾಡಲಾಗಿದೆ.

ABOUT THE AUTHOR

...view details