ನವದೆಹಲಿ:ಕೇಂದ್ರವು ಕೋವಿಡ್ ಕಾರಣದಿಂದಾಗಿ ಪರೀಕ್ಷೆ ಬರೆಯಲು ಸಾಧ್ಯವಾಗದ ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಹೆಚ್ಚುವರಿ ಅವಕಾಶ ನೀಡುವ ವಿಚಾರದ ಪರವಾಗಿಲ್ಲ ಎಂದು ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠಕ್ಕೆ ಕೇಂದ್ರ ಸರ್ಕಾರ ತಿಳಿಸಿದೆ.
ಈ ಸಂಬಂಧ ನಡೆದ ವಿಚಾರಣೆಯಲ್ಲಿ ಕೇಂದ್ರ ಸರ್ಕಾರದ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು, ಸುಪ್ರೀಂ ಕೋರ್ಟ್ ನ್ಯಾ. ಎ.ಎಂ.ಖಾನ್ವಿಲ್ಕರ್, ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೃಷ್ಣ ಮುರೈ ನೇತೃತ್ವದ ನ್ಯಾಯಪೀಠಕ್ಕೆ ಅರ್ಜಿ ಸಲ್ಲಿಸಿದರು.
ಕೊರೊನಾ ಬಿಕ್ಕಟ್ಟಿನಿಂದಾಗಿ 2020ರ ಯುಪಿಎಸ್‌ಸಿ ಪರೀಕ್ಷೆಯಿಂದ ವಂಚಿತರಾದ ಆಕಾಂಕ್ಷಿಗಳಿಗೆ ಮತ್ತೊಂದು ಅವಕಾಶ ನೀಡಲು ಸರ್ಕಾರ ಸಿದ್ಧವಿಲ್ಲ. ಈ ಬಗ್ಗೆ ಸರ್ಕಾರ ಸೂಚನೆ ನೀಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಮಾಣಪತ್ರ ಸಲ್ಲಿಸಲು ಸ್ವಲ್ಪ ಕಾಲಾವಕಾಶ ನೀಡುವಂತೆ ಎಸ್.ವಿ.ರಾಜು ಮನವಿ ಮಾಡಿದರು.